13 ಆದರೆ ಮೋಶೆ ಆ ಜನರಿಗೆ, "ನೀವು ಅಂಜಬೇಡಿರಿ. ಸುಮ್ಮನೆ ನಿಂತುಕೊಂಡಿದ್ದು ಯೆಹೋವನು ಈ ಹೊತ್ತು ನಿಮ್ಮನ್ನು ರಕ್ಷಿಸುವ ರೀತಿಯನ್ನು ನೋಡಿರಿ. ನೀವು ಈ ಹೊತ್ತು ನೋಡುವ ಐಗುಪ್ತ್ಯರನ್ನು ಇನ್ನು ಮುಂದೆ ಎಂದಿಗೂ ನೋಡುವುದಿಲ್ಲ. 14 ಯೆಹೋವನೇ ನಿಮಗಾಗಿ ಯುದ್ಧಮಾಡುವನು. ನೀವಂತು ಸುಮ್ಮನೇ ನಿಂತುಕೊಂಡಿರಿ" ಎಂದು ಹೇಳಿದನು.