Pular para o conteúdo
Publicidade

ವಿಮೋಚನಕಾಂಡ 20:3-11

3 ನಾನಲ್ಲದೆ ನಿಮಗೆ ಬೇರೆ ದೇವರುಗಳು ಇರಬಾರದು.

4 "ಯಾವ ಮೂರ್ತಿಯನ್ನೂ ಮಾಡಿಕೊಳ್ಳಬಾರದು. ಆಕಾಶದಲ್ಲಾಗಲಿ, ಭೂಮಿಯಲ್ಲಾಗಲಿ, ಭೂಮಿಯ ಕೆಳಗಣ ನೀರಿನಲ್ಲಾಗಲಿ ಇರುವ ಯಾವುದರ ರೂಪವನ್ನೂ ಮಾಡಿಕೊಳ್ಳಬಾರದು. 5 ಅವುಗಳಿಗೆ ಅಡ್ಡ ಬೀಳಬಾರದು, ಪೂಜೆ ಮಾಡಬಾರದು. ನಿನ್ನ ದೇವರಾದ ಯೆಹೋವನೆಂಬ ನಾನು ನನಗೆ ಸಲ್ಲತಕ್ಕ ಗೌರವವನ್ನು ಮತ್ತೊಬ್ಬನಿಗೆ ಬಿಟ್ಟುಕೊಡುವುದಿಲ್ಲ. ಆದುದರಿಂದ ನನ್ನನ್ನು ದ್ವೇಷಿಸುವವರ ವಿಷಯದಲ್ಲಿ ತಂದೆಗಳ ದೋಷಫಲವನ್ನು ಮಕ್ಕಳ ಮೇಲೆ, ಮೂರು ನಾಲ್ಕು ತಲೆಗಳವರೆಗೆ ಬರಮಾಡುವೆನು. 6 ನನ್ನನ್ನು ಪ್ರೀತಿಸಿ ನನ್ನ ಆಜ್ಞೆಗಳನ್ನು ಕೈಗೊಳ್ಳುವವರಿಗಾದರೋ ಸಾವಿರ ತಲೆಗಳವರೆಗೆ ದಯೆತೋರಿಸುವೆನು. 7 ನಿನ್ನ ದೇವರಾದ ಯೆಹೋವನ ಹೆಸರನ್ನು ಅಯೋಗ್ಯಕಾರ್ಯಕ್ಕಾಗಿ ಎತ್ತಬಾರದು. ಯೆಹೋವನು ತನ್ನ ಹೆಸರನ್ನು ಅಯೋಗ್ಯಕಾರ್ಯಕ್ಕಾಗಿ ಎತ್ತುವವನನ್ನು ಶಿಕ್ಷಿಸದೆ ಬಿಡುವುದಿಲ್ಲ.

8 "ಸಬ್ಬತ್ ದಿನವನ್ನು ದೇವರ ದಿನವೆಂದು ಆಚರಣೆಗೆ ತರುವುದಕ್ಕೆ ನೆನಪಿನಲ್ಲಿಟ್ಟುಕೊಳ್ಳಬೇಕು. 9 ಆರು ದಿನಗಳು ನೀನು ದುಡಿದು ನಿನ್ನ ಕೆಲಸವನ್ನೆಲ್ಲಾ ಮಾಡಿಕೊಳ್ಳಬೇಕು. 10 ಆದರೆ ಏಳನೆಯ ದಿನವು ನಿನ್ನ ದೇವರಾದ ಯೆಹೋವನಿಗೆ ಮೀಸಲಾದ ವಿಶ್ರಾಂತಿಯ ಸಬ್ಬತ್ ದಿನವಾಗಿದೆ. ಆ ದಿನದಲ್ಲಿ ನೀನು ಯಾವ ಕೆಲಸವನ್ನು ಮಾಡಬಾರದು. ನಿನ್ನ ಗಂಡುಮಕ್ಕಳು, ಹೆಣ್ಣುಮಕ್ಕಳು, ಗಂಡಾಳು, ಹೆಣ್ಣಾಳು, ಪಶುಪ್ರಾಣಿಗಳು ನಿನ್ನ ಊರಿನಲ್ಲಿರುವ ಅನ್ಯದೇಶದವನು ಸಹ ಯಾವ ಕೆಲಸವನ್ನೂ ಮಾಡಬಾರದು. 11 ಆರು ದಿನಗಳಲ್ಲಿ ಯೆಹೋವನು ಭೂಮ್ಯಾಕಾಶಗಳನ್ನೂ, ಸಮುದ್ರವನ್ನೂ, ಅವುಗಳಲ್ಲಿರುವ ಸಮಸ್ತವನ್ನೂ ನಿರ್ಮಾಣ ಮಾಡಿ, ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡನು. ಆದುದರಿಂದ ಯೆಹೋವನು ಸಬ್ಬತ್ ದಿನವನ್ನು ತನ್ನ ಪರಿಶುದ್ಧ ದಿನವಾಗಿರಲಿ ಎಂದು ಆಶೀರ್ವದಿಸಿದನು.

Estes versículos te tocaram? Ore agora!

+581 estão orando agora.

Junte-se à corrente de oração.