ತಾಮ್ರದ ತೊಟ್ಟಿ
17 ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ, 18 "ಸ್ನಾನಕ್ಕಾಗಿ ಒಂದು ತಾಮ್ರದ ತೊಟ್ಟಿಯನ್ನೂ ಅದಕ್ಕೆ ತಾಮ್ರದ ಪೀಠವನ್ನೂ ಮಾಡಿಸಿ ದೇವದರ್ಶನದ ಗುಡಾರಕ್ಕೂ, ಯಜ್ಞವೇದಿಗೂ ನಡುವೆ ಇಟ್ಟು ಅದರಲ್ಲಿ ನೀರು ತುಂಬಿಸಬೇಕು. 19 ಆರೋನನೂ ಅವನ ಮಕ್ಕಳೂ ಅದರಿಂದ ಕೈಕಾಲುಗಳನ್ನು ತೊಳೆದುಕೊಳ್ಳಬೇಕು. 20 ಅವರು ದೇವದರ್ಶನದ ಗುಡಾರದೊಳಗೆ ಹೋಗುವಾಗ ಹಾಗೂ ದೇವರ ಸೇವೆಯನ್ನು ಮಾಡುವವರಾಗಿ ಯೆಹೋವನಿಗೆ ಹೋಮವನ್ನು ಸಮರ್ಪಿಸುವುದಕ್ಕಾಗಿ ಯಜ್ಞವೇದಿಯ ಬಳಿಗೆ ಬರುವಾಗ ಜೀವದಿಂದಿರಲು ಕೈಕಾಲುಗಳನ್ನು ತೊಳೆದುಕೊಂಡು ಬರಬೇಕು. 21 ತೊಳೆದುಕೊಳ್ಳದೆ ಬಂದರೆ ಮರಣ ಶಿಕ್ಷೆಯಾಗುವುದು. ಇದು ಅವನಿಗೂ ಮತ್ತು ಅವನ ಸಂತತಿಯವರಿಗೂ ಶಾಶ್ವತ ನಿಯಮವಾಗಿರಬೇಕು."