ಒಡಂಬಡಿಕೆಯ ನವೀಕರಣ
10 ಯೆಹೋವನು ಹೇಳಿದ್ದೇನೆಂದರೆ, "ಕೇಳು, ನಾನು ಒಂದು ಒಡಂಬಡಿಕೆಯನ್ನು ಸ್ಥಾಪಿಸುತ್ತೇನೆ, ಲೋಕದಲ್ಲಿ ಎಲ್ಲಿಯೂ ಯಾವ ಜನಾಂಗದಲ್ಲಿಯಾದರೂ ನಡೆಯದಂಥ ಮಹತ್ಕಾರ್ಯಗಳನ್ನು ನಿನ್ನ ಜನರೆಲ್ಲರು ನೋಡುವಂತೆ ನಡೆಸುವೆನು. ನಿಮ್ಮ ಸುತ್ತಮುತ್ತಲಿರುವ ಎಲ್ಲಾ ಜನರೂ ಯೆಹೋವನು ಮಾಡುವ ಮಹತ್ಕಾರ್ಯವನ್ನು ನೋಡುವರು. ನಾನು ನಿಮ್ಮ ವಿಷಯದಲ್ಲಿ ಮಾಡಬೇಕೆಂದಿರುವುದು ಭಯಂಕರವಾದದ್ದಾಗಿದೆ.