ನಕ್ಷತ್ರಗಳಂತೆ ಪ್ರಕಾಶಿಸುವುದು
12 ಹೀಗಿರುವಲ್ಲಿ ನನ್ನ ಪ್ರಿಯರೇ, 2:12 ಫಿಲಿ. 1:5; 4:15ನೀವು ನನ್ನ ಮಾತನ್ನು ಯಾವಾಗಲೂ ಅನುಸರಿಸಿದಂತೆ ಈಗಲೂ ಅನುಸರಿಸಿರಿ. ನಾನು ನಿಮ್ಮಲ್ಲಿರುವಾಗ ಮಾತ್ರವಲ್ಲದೆ, ನಾನಿಲ್ಲದಿರುವಾಗಲೂ ಬಹು ಹೆಚ್ಚಾಗಿ ಮನೋಭೀತಿಯಿಂದ ನಡುಗುವವರಾಗಿ ನಿಮ್ಮ ನಿಮ್ಮ ರಕ್ಷಣೆಯನ್ನು ಸಾಧಿಸಿಕೊಳ್ಳಿರಿ. 13 ಯಾಕೆಂದರೆ 2:13 1 ಕೊರಿ 12:6; 15:10; ಇಬ್ರಿ. 13:21ದೇವರೇ ತನ್ನ 2:13 1 ತಿಮೊ. 2:4ಸುಚಿತ್ತವನ್ನು ನೆರವೇರಿಸಬೇಕೆಂದು ನಿಮ್ಮಲ್ಲಿ ಉದ್ದೇಶವನ್ನೂ ಮತ್ತು ಪ್ರಯತ್ನವನ್ನೂ ಉಂಟುಮಾಡುವವನಾಗಿದ್ದಾನೆ. 14 ಗೊಣಗುಟ್ಟದೆಯೂ, ವಿವಾದಗಳಿಲ್ಲದೆಯೂ ಎಲ್ಲವನ್ನು ಮಾಡಿರಿ. 15 ಹೀಗೆ ನೀವು ನಿರ್ದೋಷಿಗಳೂ ಹಾಗೂ ಯಥಾರ್ಥಮನಸ್ಸುಳ್ಳವರೂ ಆಗಿದ್ದು 2:15 ಧರ್ಮೋ 32:5; ಮತ್ತಾ 17:17; ಲೂಕ 9:41ವಕ್ರಬುದ್ಧಿಯುಳ್ಳ ಮೂರ್ಖ ಜಾತಿಯ ಮಧ್ಯದಲ್ಲಿ 2:15 ಮತ್ತಾ 5:45; ಎಫೆ 5:1ದೇವರ ನಿಷ್ಕಳಂಕರಾದ ಮಕ್ಕಳಾಗಿರುವಿರಿ. 16 ಇವರೊಳಗೆ ನೀವು ಸರ್ವರಿಗೂ 2:16 ಅ. ಕೃ. 5:20ಜೀವದಾಯಕ ವಾಕ್ಯವನ್ನು ತೋರಿಸಿಕೊಡುವವರಾಗಿದ್ದು, ಲೋಕದೊಳಗೆ 2:16 ಮತ್ತಾ 5:14,16; ತೀತ 2:10ಹೊಳೆಯುವ ನಕ್ಷತ್ರಗಳಂತೆ ಕಾಣಿಸುತ್ತೀರಿ. ನೀವು ಹೀಗೆ ನಡೆದರೆ 2:16 ಗಲಾ. 2:2; 4:11; 1 ಥೆಸ. 3:5ನಾನು ಸುವಾರ್ತೆಗಾಗಿ ಓಡಿದ ಓಟವು ವ್ಯರ್ಥವಲ್ಲ, ನಾನು ಪ್ರಯಾಸಪಟ್ಟದ್ದೂ ವ್ಯರ್ಥವಲ್ಲ ಎಂಬ 2:16 2 ಕೊರಿ 1:14ಹೊಗಳಿಕೆಯು ಕ್ರಿಸ್ತನ ದಿನದಲ್ಲಿ ನನಗೆ ಉಂಟಾಗುವುದು.