6 4:6 ಮತ್ತಾ 6:25ಯಾವ ಸಂಬಂಧವಾಗಿಯೂ ಚಿಂತೆಮಾಡದೆ 4:6 ಜ್ಞಾ. 16:3ಸರ್ವವಿಷಯಗಳಲ್ಲಿ ದೇವರ ಮುಂದೆ ಕೃತಜ್ಞತಾಸ್ತುತಿಯನ್ನೂ ಪ್ರಾರ್ಥನೆ ವಿಜ್ಞಾಪನೆಗಳನ್ನೂ ಮಾಡುತ್ತಾ ನಿಮಗೆ ಬೇಕಾದದ್ದನ್ನು ಕರ್ತನಿಗೆ ತಿಳಿಯಪಡಿಸಿರಿ. 7 4:7 ಎಫೆ 3:19ಆಗ ಎಲ್ಲಾ ಗ್ರಹಿಕೆಯನ್ನು ಮೀರುವ 4:7 ವ. 9, ಯೆಶಾ 26:3, ಕೊಲೊ 3:15, ಯೋಹಾ 14:27ದೇವರ ಶಾಂತಿಯು ನಿಮ್ಮ ಹೃದಯಗಳನ್ನೂ, ಯೋಚನೆಗಳನ್ನೂ ಕ್ರಿಸ್ತ ಯೇಸುವಿನಲ್ಲಿ ಕಾಪಾಡುವುದು.
8 ಕಡೆಯದಾಗಿ, ಸಹೋದರರೇ, ಯಾವುದು ಸತ್ಯವೂ, ಮಾನ್ಯವೂ, ನ್ಯಾಯವೂ, ಶುದ್ಧವೂ, ಪ್ರೀತಿಕರವೂ, ಮನೋಹರವೂ ಆಗಿದೆಯೋ, ಯಾವುದು ಸದ್ಗುಣವಾಗಿದೆಯೋ, ಯಾವುದು ಕೀರ್ತಿಗೆ ಯೋಗ್ಯವೋ, ಅವೆಲ್ಲವುಗಳ ಬಗ್ಗೆ ಚಿಂತಿಸುವವರಾಗಿರಿ. 9 4:9 1 ಥೆಸ. 4:1ನೀವು ಯಾವುದನ್ನು ನನ್ನಿಂದ ಕಲಿತು ಹೊಂದಿದ್ದೀರೋ, ಮತ್ತು 4:9 ಫಿಲಿ. 3:17ಯಾವುದನ್ನು ನನ್ನಲ್ಲಿ ಕೇಳಿ ಕಂಡಿರುವಿರೋ ಅದನ್ನೇ ಮಾಡುತ್ತಾ ಬನ್ನಿರಿ. ಹೀಗೆ ಮಾಡಿದರೆ 4:9 ಫಿಲಿ. 4:7, ರೋಮಾ. 15:33ಶಾಂತಿದಾಯಕನಾದ ದೇವರು ನಿಮ್ಮೊಂದಿಗಿರುವನು.