26 ಹಾಗೆ 3:26 ಗಲಾ. 4:5,6ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿಟ್ಟಿರುವ ನಂಬಿಕೆಯ ಮೂಲಕ ದೇವರ ಮಕ್ಕಳಾಗಿದ್ದೀರಿ.
27 ಹೇಗೆಂದರೆ 3:27 ರೋಮಾ. 6:3ಕ್ರಿಸ್ತನಲ್ಲಿ ಸೇರುವುದಕ್ಕೆ ದೀಕ್ಷಾಸ್ನಾನ ಮಾಡಿಸಿಕೊಂಡಿರುವ 3:27 ರೋಮಾ. 13:14ನೀವೆಲ್ಲರೂ ಕ್ರಿಸ್ತನನ್ನು ಧರಿಸಿಕೊಂಡಿದ್ದೀರಿ. 28 3:28 ಯೋಹಾ 10:16; 17:11; 1 ಕೊರಿ 10:17; ಎಫೆ 2:14-16; 4:4 ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವುದರಿಂದ 3:28 ಗಲಾ. 3:14; 5:6; 6:15; ರೋಮಾ. 3:30; 8:17; ಎಫೆ 3:6ಯೆಹೂದ್ಯನು ಅಥವಾ ಗ್ರೀಕನು ಎಂದಾಗಲೀ, ಆಳು ಅಥವಾ ಒಡೆಯ ಎಂದಾಗಲೀ, 3:28 1 ಕೊರಿ 11:11ಗಂಡು ಹಾಗೂ ಹೆಣ್ಣು ಎಂದಾಗಲೀ ಭೇದವಿಲ್ಲ.