6 3:6 ಆದಿ 12:3; 18:18 ಅಬ್ರಹಾಮನು "ದೇವರನ್ನು ನಂಬಿದನು, ಆ ನಂಬಿಕೆಯು ಅವನ ಪಾಲಿಗೆ ನೀತಿಯೆಂದು ಎಣಿಸಲ್ಪಟ್ಟಿತು" ಎಂಬುದಾಗಿ ಬರೆದಿದೆಯಲ್ಲಾ. 7 ಆದ್ದರಿಂದ 3:7 ವ. 9ನಂಬುವವರೇ ಅಬ್ರಹಾಮನ ಮಕ್ಕಳೆಂದು ತಿಳಿದುಕೊಳ್ಳಿರಿ.
8 3:8 ರೋಮಾ. 3:30 ದೇವರು ಅನ್ಯಜನರನ್ನು ನಂಬಿಕೆಯ ನಿಮಿತ್ತವಾಗಿಯೇ ನೀತಿವಂತರೆಂದು ನಿರ್ಣಯಿಸುವನೆಂಬುದಾಗಿರುವ ವೇದವಾಕ್ಯವನ್ನು ಮೊದಲೇ ಕಂಡು ಅಬ್ರಹಾಮನಿಗೆ, 3:8 ಆದಿ 12:3; 18:18"ನಿನ್ನ ಮೂಲಕ ಎಲ್ಲಾ ಜನಾಂಗಗಳವರಿಗೆ ಆಶೀರ್ವಾದವುಂಟಾಗುವುದೆಂಬ" ಸುವಾರ್ತೆಯನ್ನು ಮುಂಚಿತವಾಗಿಯೇ ತಿಳಿಸಿತು. 9 ಹೀಗಿರಲಾಗಿ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಡುವವರು, ನಂಬಿಕೆಯಿಟ್ಟ ಅಬ್ರಹಾಮನೊಂದಿಗೆ ಆಶೀರ್ವಾದವನ್ನು ಹೊಂದುವರು.