ಕ್ರೈಸ್ತ ಸ್ವಾತಂತ್ರ್ಯ
1 ಕ್ರಿಸ್ತನು ನಮ್ಮನ್ನು 5:1 ಗಲಾ. 2:4; 5:13ಸ್ವತಂತ್ರರಾಗಿರಿಸಬೇಕೆಂದೇ ನಮಗೆ ಬಿಡುಗಡೆ ಮಾಡಿದನು. ಅದರಲ್ಲಿ ಸ್ಥಿರವಾಗಿ ನಿಲ್ಲಿರಿ, 5:1 ಅ. ಕೃ. 15:10ದಾಸತ್ವದ ನೊಗದಲ್ಲಿ ತಿರುಗಿ ಸಿಕ್ಕಿಕೊಳ್ಳಬೇಡಿರಿ.
2 ನೋಡಿರಿ, ಪೌಲನೆಂಬ ನಾನು ನಿಮಗೆ ಹೇಳುತ್ತೇನೆ, 5:2 ಅ. ಕೃ. 15:1; 1 ಕೊರಿ 7:18; ಗಲಾ. 5:3-11ನೀವು ಸುನ್ನತಿಮಾಡಿಸಿಕೊಂಡರೆ ಕ್ರಿಸ್ತನಿಂದ ನಿಮಗೆ ಏನೂ ಪ್ರಯೋಜನವಿಲ್ಲ. 3 5:3 ರೋಮಾ. 2:25ಸುನ್ನತಿ ಮಾಡಿಸಿಕೊಳ್ಳುವ ಪ್ರತಿಯೊಬ್ಬನಿಗೆ, ನೀನು ಧರ್ಮಶಾಸ್ತ್ರದಲ್ಲಿ ಹೇಳಿರುವುದನ್ನೆಲ್ಲಾ ಮಾಡುವ ಹಂಗಿನಲ್ಲಿದ್ದೀ ಎಂದು ತಿರುಗಿ ಪ್ರಮಾಣವಾಗಿ ಹೇಳುತ್ತೇನೆ. 4 5:4 ಗಲಾ. 2:21; 3:10; ರೋಮಾ. 9:31,32ನಿಮ್ಮಲ್ಲಿ ಯಾರಾರು ಧರ್ಮಶಾಸ್ತ್ರದಿಂದ ನೀತಿವಂತರಾಗಬೇಕೆಂದು ಬಯಸಿದ್ದೀರೋ ಅವರು ಕ್ರಿಸ್ತನಿಂದ ಅಗಲಿಹೋದವರಾಗಿದ್ದೀರಿ. ಕೃಪೆಯಿಂದ ಬಿದ್ದಹೋದವರಾಗಿದ್ದೀರಿ. 5 ನಾವಾದರೋ ದೇವರಾತ್ಮನ ಮೂಲಕ ನಂಬಿಕೆಯಿಂದ ನೀತಿವಂತರಾಗುತ್ತೇವೆಂಬುವ 5:5 ರೋಮಾ. 8:23,25ನಿರೀಕ್ಷೆ ಸಫಲವಾಗುವುದೆಂದು ಎದುರುನೋಡುವವರಾಗಿದ್ದೇವೆ. 6 ಕ್ರಿಸ್ತ ಯೇಸುವಿನಲ್ಲಿರುವವರಿಗೆ 5:6 ಗಲಾ. 6:15; 1 ಕೊರಿ 7:19; ಕೊಲೊ 3:11; ಗಲಾ. 3:28ಸುನ್ನತಿಯಾದರೂ ಆಗದಿದ್ದರೂ ಪ್ರಯೋಜನವಿಲ್ಲ, ಆದರೆ 5:6 ಎಫೆ 6:23; 1 ಥೆಸ. 1:3; ಯಾಕೋಬ 2:18,20,22ಅವರಲ್ಲಿ ಪ್ರೀತಿಯಿಂದ ಹೊರಹೊಮ್ಮುವ ನಂಬಿಕೆಯೇ ಪ್ರಯೋಜನವಾಗಿದೆ.