ಪರಸ್ಪರ ಭಾರವನ್ನು ಹೊತ್ತುಕೊಳ್ಳಿರಿ
1 ಸಹೋದರರೇ, 6:1 2 ಕೊರಿ 2:7, ಇಬ್ರಿ. 12:13, ಯಾಕೋಬ. 5:19ನಿಮ್ಮಲ್ಲಿ ಯಾರಾದರೂ ಯಾವುದಾದರೂ ಪಾಪದಲ್ಲಿ ಸಿಕ್ಕಿಹಾಕಿಕೊಂಡಿದ್ದರೆ 6:1 ರೋಮಾ. 15:1ಅಂಥವರನ್ನು ಆತ್ಮಭರಿತರಾದ ನೀವು ಶಾಂತಭಾವದಿಂದ ತಿದ್ದಿ ಸರಿಮಾಡಿರಿ. ನೀವಾದರೂ ಶೋಧನೆಗೆ ಒಳಗಾಗದಂತೆ ನಿಮ್ಮ ವಿಷಯದಲ್ಲಿ ಎಚ್ಚರಿಕೆಯಾಗಿರಿ. 2 ಒಬ್ಬರು ಮತ್ತೊಬ್ಬರ ಭಾರವನ್ನು ಹೊತ್ತುಕೊಳ್ಳಲಿ, ಹೀಗೆ ಕ್ರಿಸ್ತನ 6:2 ಧರ್ಮಶಾಸ್ತ್ರವನ್ನು, ಗಲಾ. 5:14ನೀತಿನಿಯಮಗಳನ್ನು ನೆರವೇರಿಸಿರಿ. 3 6:3 1 ಕೊರಿ 3:18ಯಾವನಾದರೂ ಅಲ್ಪನಾಗಿದ್ದು ತಾನು ದೊಡ್ಡವನೆಂದು ಭಾವಿಸಿಕೊಂಡರೆ ತನ್ನನ್ನು ತಾನೇ ಮೋಸಗೊಳಿಸಿಕೊಳ್ಳುವನಾಗಿದ್ದಾನೆ. 4 6:4 1 ಕೊರಿ 11:28, 2 ಕೊರಿ 13:5ಪ್ರತಿಯೊಬ್ಬನು ತಾನು ಮಾಡಿದ ಕೆಲಸವನ್ನು ಪರೀಕ್ಷಿಸಿಕೊಳ್ಳಲಿ. ಆಗ ಅವನು ತನ್ನ ನಿಮಿತ್ತದಿಂದ ಹೆಚ್ಚಳಪಡಬಹುದೇ ಹೊರತು ಮತ್ತೊಬ್ಬನೊಂದಿಗೆ ಹೋಲಿಸಿಕೊಂಡು ಹೆಚ್ಚಳಪಡಬೇಕಾಗಿರುವುದಿಲ್ಲ. 5 ಏಕೆಂದರೆ 6:5 ರೋಮಾ. 14:12ಪ್ರತಿಯೊಬ್ಬನು ತನ್ನ ಸ್ವಂತ ಹೊರೆಯನ್ನು ತಾನೇ ಹೊತ್ತುಕೊಳ್ಳಬೇಕು.