20 ತರುವಾಯ ದೇವರು, "ಗುಂಪು ಗುಂಪಾಗಿ ಚಲಿಸುವ ಜಲಜಂತುಗಳು ನೀರಿನಲ್ಲಿ ತುಂಬಿಕೊಳ್ಳಲಿ, ಪಕ್ಷಿಗಳು ಭೂಮಿಯ ಮೇಲೆ ಅಂತರಿಕ್ಷದಲ್ಲಿ ಹಾರಾಡಲಿ" ಎಂದು ಹೇಳಿದನು. 21 ಹೀಗೆ ದೇವರು ಮಹಾ ಜಲಚರಗಳನ್ನೂ ನೀರಿನಲ್ಲಿ ತುಂಬಿರುವ ಸಕಲ ವಿಧವಾದ ಜೀವಿಗಳನ್ನೂ ರೆಕ್ಕೆಗಳುಳ್ಳ ಸಕಲವಿಧವಾದ ಪಕ್ಷಿಗಳನ್ನೂ ಅವುಗಳ ಜಾತಿಗನುಸಾರವಾಗಿ ಉಂಟುಮಾಡಿದನು. ಆತನು ಅದನ್ನು ಒಳ್ಳೆಯದೆಂದು ಕಂಡನು.
22 ಇದಲ್ಲದೆ ದೇವರು, "ಅವುಗಳಿಗೆ ನೀವು ಅಭಿವೃದ್ಧಿಯಾಗಿ ಹೆಚ್ಚಿರಿ, ಜಲಚರಗಳು ಸಮುದ್ರದ ನೀರಿನಲ್ಲಿ ತುಂಬಿಕೊಳ್ಳಲಿ, ಪಕ್ಷಿಗಳು ಭೂಮಿಯ ಮೇಲೆ ಹೆಚ್ಚಲಿ" ಎಂದು ಹೇಳಿ ಆಶೀರ್ವದಿಸಿದನು. 23 ಹೀಗೆ ಸಾಯಂಕಾಲವೂ ಉದಯಕಾಲವೂ ಆಗಿ ಐದನೆಯ ದಿನವಾಯಿತು.
24 ಬಳಿಕ ದೇವರು, "ಭೂಮಿಯಿಂದ ಜೀವಜಂತುಗಳು ಉಂಟಾಗಲಿ; ಪಶು, ಕ್ರಿಮಿಗಳೂ ಕಾಡುಮೃಗಗಳು, ತಮ್ಮ ತಮ್ಮ ಜಾತಿಗನುಸಾರವಾಗಿ ಹುಟ್ಟಲಿ" ಅಂದನು. ಹಾಗೆಯೇ ಆಯಿತು.