5 ಮನುಷ್ಯರು ಕಟ್ಟುತ್ತಿದ್ದ ಆ ಪಟ್ಟಣವನ್ನೂ, ಗೋಪುರವನ್ನೂ ನೋಡುವುದಕ್ಕೆ ಯೆಹೋವನು ಇಳಿದು ಬಂದನು. 6 ನೋಡಿದ ಮೇಲೆ ಯೆಹೋವನು, "ಇವರು ಒಂದೇ ಜನಾಂಗ; ಇವರೆಲ್ಲರಿಗೂ ಒಂದೇ ಭಾಷೆ. ಪ್ರಾರಂಭದಲ್ಲೇ ಇವರು ಇಷ್ಟು ದೊಡ್ಡ ಯೋಜನೆಯೊಂದಿಗೆ ಒಟ್ಟಾಗಿ ಕೆಲಸ ಮಾಡಲಾರಂಭಿಸಿದ್ದಾರೆ. ಇನ್ನು ಮುಂದೆ ಇವರು ಏನು ಮಾಡಲು ಉದ್ದೇಶಿಸಿದರೂ ಇವರಿಗೆ ಯಾವುದೂ ಅಸಾಧ್ಯವಾಗುವುದಿಲ್ಲ. 7 ಇವರಲ್ಲಿ ಒಬ್ಬರ ಮಾತು ಒಬ್ಬರಿಗೆ ತಿಳಿಯದಂತೆ ಇವರ ಭಾಷೆಯನ್ನು ಗಲಿಬಿಲಿ ಮಾಡೋಣ ಬನ್ನಿ" ಎಂದನು.
8 ಯೆಹೋವನು ಅದೇ ಪ್ರಕಾರ ಅವರನ್ನು ಭೂಲೋಕದಲ್ಲೆಲ್ಲಾ ಚದರಿಸಿ ಬಿಟ್ಟನು. ಅವರು ಆ ಪಟ್ಟಣ ಕಟ್ಟುವುದನ್ನು ನಿಲ್ಲಿಸಿಬಿಟ್ಟರು. 9 ಸಮಸ್ತ ಲೋಕದ ಭಾಷೆಯನ್ನು ಯೆಹೋವನು ಅಲ್ಲಿ ಗಲಿಬಿಲಿ ಮಾಡಿ, ಅವರನ್ನು ಭೂಲೋಕದಲ್ಲೆಲ್ಲಾ ಚದರಿಸಿದ್ದರಿಂದ ಆ ಪಟ್ಟಣಕ್ಕೆ 11:9 ಬಾಬಿಲೋನ್ಬಾಬೆಲ್ (ದೇವರ ಬಾಗಿಲು) ಎಂಬ ಹೆಸರಾಯಿತು.