ದೇವರು ಅಬ್ರಾಮನನ್ನು ಕರೆದದ್ದು
1 ಯೆಹೋವನು ಅಬ್ರಾಮನಿಗೆ, "ನೀನು, ನಿನ್ನ ಸ್ವದೇಶವನ್ನೂ, 12:1 ಅಥವಾ ಜನ್ಮಸ್ಥಳದಿಂದ.ಬಂಧುಬಳಗವನ್ನೂ, ತಂದೆಯ ಮನೆಯನ್ನೂ ಬಿಟ್ಟು ನಾನು ತೋರಿಸುವ ದೇಶಕ್ಕೆ ಹೊರಟು ಹೋಗು. 2 ನಾನು ನಿನ್ನನ್ನು ಮಹಾ ಜನಾಂಗವಾಗುವಂತೆ ಮಾಡಿ, ಆಶೀರ್ವದಿಸಿ, ನಿನ್ನ ಹೆಸರನ್ನು ಪ್ರಖ್ಯಾತಿಗೆ ತರುವೆನು. ನೀನು ಆಶೀರ್ವಾದದ ನಿಧಿಯಾಗುವಿ. 3 ನಿನ್ನನ್ನು ಆಶೀರ್ವದಿಸುವವರನ್ನು ನಾನು ಆಶೀರ್ವದಿಸುವೆನು; ನಿನ್ನನ್ನು ಶಪಿಸುವವರನ್ನು ನಾನು ಶಪಿಸುವೆನು. ನಿನ್ನ ಮೂಲಕ ಭೂಲೋಕದ ಎಲ್ಲಾ ಜನಾಂಗಗಳಿಗೆ ಆಶೀರ್ವಾದವುಂಟಾಗುವುದು" ಎಂದು ಹೇಳಿದನು.