8 ಹೀಗಿರಲು ಅಬ್ರಾಮನು ಲೋಟನಿಗೆ, "ನನಗೂ ನಿನಗೂ, ನನ್ನ ದನ ಕಾಯುವವರಿಗೂ ನಿನ್ನ ದನ ಕಾಯುವವರಿಗೂ ಜಗಳವಾಗಬಾರದು; ನಾವು ಸಹೋದರರಲ್ಲವೇ. 9 ದೇಶವೆಲ್ಲಾ ನಿನ್ನ ಎದುರಿಗೆ ಇದೆ; ದಯವಿಟ್ಟು ನನ್ನನ್ನು ಬಿಟ್ಟು ಪ್ರತ್ಯೇಕವಾಗಿ ಹೋಗು. ನೀನು ಎಡಗಡೆಗೆ ಹೋದರೆ ನಾನು ಬಲಗಡೆಗೆ ಹೋಗುವೆನು; ನೀನು ಬಲಗಡೆಗೆ ಹೋದರೆ ನಾನು ಎಡಗಡೆಗೆ ಹೋಗುವೆನು" ಎಂದು ಹೇಳಿದನು.
Publicidade