ಆದಾಮ ಹವ್ವಳನ್ನು ತೋಟದಿಂದ ಹೊರಹಾಕಿದ್ದು
22 ಯೆಹೋವ ದೇವರು "ಈ ಮನುಷ್ಯನು ಒಳ್ಳೆಯದರ ಮತ್ತು ಕೆಟ್ಟದ್ದರ ಬೇಧವನ್ನರಿತು ನಮ್ಮಲ್ಲಿ ಒಬ್ಬನಂತಾದನಲ್ಲಾ? ಇದರಿಂದ ಇವನು ಕೈಚಾಚಿ ಜೀವವೃಕ್ಷದ ಫಲವನ್ನು ಸಹ ತಿಂದು ಶಾಶ್ವತವಾಗಿ ಬದುಕುವವನಾಗಬಾರದು" ಎಂದು ಆಜ್ಞಾಪಿಸಿದನು. 24 ಹೀಗೆ ಆತನು ಮನುಷ್ಯನನ್ನು ಹೊರಗೆ ಹಾಕಿ, ಜೀವವೃಕ್ಷಕ್ಕೆ ಹೋಗುವ ದಾರಿಯನ್ನು ಕಾಯುವುದಕ್ಕೆ, ಏದೆನ್ ವನದ ಪೂರ್ವ ದಿಕ್ಕಿನಲ್ಲಿ ಕೆರೂಬಿಯರನ್ನೂ, ಎಲ್ಲಾ ಕಡೆಯಲ್ಲಿ ಧಗಧಗಿಸುತ್ತಾ ಉರಿಯುವ ಜ್ವಾಲೆಯ ಕತ್ತಿಯನ್ನು ಇರಿಸಿದನು.