3 ಯೋಸೇಫನು ಇಸ್ರಾಯೇಲನಿಗೆ ಮುಪ್ಪಿನಲ್ಲಿ ಹುಟ್ಟಿದವನಾಗಿದ್ದುದರಿಂದ ಅವನನ್ನು ತನ್ನ ಎಲ್ಲಾ ಮಕ್ಕಳಿಗಿಂತ ಹೆಚ್ಚಾಗಿ ಪ್ರೀತಿಸುತ್ತಿದ್ದನು, ಅಲ್ಲದೆ ಅವನಿಗೆ ಬಣ್ಣಬಣ್ಣದ ಒಂದು ನಿಲುವಂಗಿಯನ್ನು ಹೊಲಿಸಿ ಕೊಟ್ಟಿದ್ದನು. 4 ಅವನ ಅಣ್ಣತಮ್ಮಂದಿರು, ತಮ್ಮ ತಂದೆಯು ಎಲ್ಲಾ ಮಕ್ಕಳಿಗಿಂತಲೂ ಇವನನ್ನೇ ಹೆಚ್ಚಾಗಿ ಪ್ರೀತಿಸುತ್ತಿರುವುದನ್ನು ನೋಡಿ ಯೋಸೇಫನನ್ನು ಹಗೆಮಾಡಿ ಅವನೊಡನೆ ಸ್ನೇಹಭಾವದಿಂದ ಮಾತನಾಡಲಾರದೆ ಹೋದರು.
28 ಅಷ್ಟರಲ್ಲಿ ಮಿದ್ಯಾನ್ಯರಾದ ವರ್ತಕರು ಹಾದುಹೋಗುತ್ತಿದ್ದರು. ಅವರು ಯೋಸೇಫನನ್ನು ಗುಂಡಿಯೊಳಗಿಂದ ಮೇಲೆ ಎತ್ತಿ ಆ ಇಷ್ಮಾಯೇಲ್ಯರಿಗೆ 37:28 230 ಗ್ರಾಂ ಬೆಳ್ಳಿ, ಇದು ಯುವ ದಾಸನಿಗಿರುವ ಬೆಲೆ.ಇಪ್ಪತ್ತು ಬೆಳ್ಳಿಯ ನಾಣ್ಯಗಳಿಗೆ ಅವನನ್ನು ಮಾರಿದರು. ಅವರು ಅವನನ್ನು ಐಗುಪ್ತ ದೇಶಕ್ಕೆ ಕರೆದುಕೊಂಡು ಹೋದರು.