12 ನೀನು ಭೂಮಿಯನ್ನು ವ್ಯವಸಾಯ ಮಾಡಿದರೂ, ಅದು ಇನ್ನು ಮುಂದೆ ನಿನಗೆ ಫಲಕೊಡುವುದಿಲ್ಲ. ನೀನು ಭೂಲೋಕದಲ್ಲಿ ಅಲೆದಾಡುವವನು ದೇಶ ಭ್ರಷ್ಟನೂ ಆಗಿರುವಿ" ಎಂದನು.
13 ಆಗ ಕಾಯಿನನು ಯೆಹೋವನಿಗೆ, "ನನ್ನ ಅಪರಾಧದ ಫಲ ಸಹಿಸಲಾರದಷ್ಟಾಗಿದೆ. 14 ಇಗೋ, ನೀನು ಈ ಹೊತ್ತು ನನ್ನನ್ನು ಸ್ವದೇಶದಿಂದ ಓಡಿಸಿ ಬಿಟ್ಟಿದ್ದೀಯಲ್ಲಾ! ನಿನ್ನ ಸಮ್ಮುಖದಿಂದ ಮರೆಯಾಗಿರುವೆನು. ಆದ್ದರಿಂದ ನಾನು ಭೂಮಿಯಲ್ಲಿ ಅಲೆಮಾರಿಯಾಗಿ ದೇಶಭ್ರಷ್ಟನೂ ಆಗಬೇಕಾಯಿತು; ಇದಲ್ಲದೆ ನನ್ನನ್ನು ಕಂಡವರು ನನ್ನನ್ನು ಕೊಲ್ಲುವರು" ಎಂದು ಹೇಳಿದನು.
15 ಅದಕ್ಕೆ ಯೆಹೋವನು, "ಕಾಯಿನನ ಪ್ರಾಣವನ್ನು ತೆಗೆದವನಿಗೆ ಏಳರಷ್ಟು ಪ್ರತಿದಂಡನೆಯಾಗುವುದು" ಎಂದು ಹೇಳಿದನು. ಕಾಯಿನನನ್ನು ಕಂಡವರು ಕೊಲ್ಲದ ಹಾಗೆ ಯೆಹೋವನು ಅವನ ಮೇಲೆ ಒಂದು ಗುರುತನ್ನು ಇಟ್ಟನು. 16 ಆಗ ಕಾಯಿನನು ಯೆಹೋವನ ಸನ್ನಿಧಿಯಿಂದ ಹೊರಟು ಹೋಗಿ ಏದೆನ್ ಪೂರ್ವದಲ್ಲಿದ್ದ 4:16 ನೋದ್ ಎಂದರೆ ಅಲೆನಾಡು.ನೋದ್ ಎಂಬ ದೇಶದಲ್ಲಿ ನೆಲೆಸಿದನು.