23 ಲೆಮೆಕನು ತನ್ನ ಹೆಂಡತಿಯರಿಗೆ ಹೀಗೆಂದನು;
"ಆದಾ, ಚಿಲ್ಲಾ, ನನ್ನ ಮಾತಿಗೆ ಕಿವಿಕೊಡಿರಿ;
ಲೆಮೆಕನ ಹೆಂಡತಿಯರೇ, ನಾನು ಹೇಳುವುದನ್ನು ಗಮನಿಸಿರಿ.
ನನಗೆ ಗಾಯ ಮಾಡಿದ ಒಬ್ಬ ಮನುಷ್ಯನನ್ನು ಕೊಂದೆನು;
ನನ್ನನ್ನು ಹೊಡೆದ ಒಬ್ಬ ಪ್ರಾಯಸ್ಥನನ್ನು ಹತಮಾಡಿದೆನು.
24 ಕಾಯಿನನನ್ನು ಕೊಂದವನಿಗೆ ಏಳರಷ್ಟು ಪ್ರತಿದಂಡನೆ ಬರುವುದಾದರೆ,
ಲೆಮೆಕನನ್ನು ಹೊಡೆಯುವವನಿಗೆ ಎಪ್ಪತ್ತೇಳರಷ್ಟಾಗುವುದು ಅಲ್ಲವೇ" ಎಂದನು.