ಯೋಸೇಫನು ತನ್ನನ್ನು ಗುರುತಿಸಿಕೊಂಡದ್ದು
1 ಯೋಸೇಫನು ಇದನ್ನು ಕೇಳಿ ತನ್ನ ಎದುರಿನಲ್ಲಿ ನಿಂತಿದ್ದವರ ಮುಂದೆ ದುಃಖವನ್ನು ತಾಳಲಾರದೆ, "ಎಲ್ಲರನ್ನು ನನ್ನ ಬಳಿಯಿಂದ ಹೊರಗೆ ಕಳುಹಿಸಿರಿ" ಎಂದು ಕೂಗಿದನು. ಯೋಸೇಫನು ತನ್ನ ಅಣ್ಣತಮ್ಮಂದಿರಿಗೆ ತನ್ನ ಗುರುತು ಸಿಕ್ಕುವಂತೆ ಮಾಡುವ ವೇಳೆಯಲ್ಲಿ ಬೇರೆ ಯಾರೂ ಹತ್ತಿರ ಇರಲಿಲ್ಲ.
4 ಯೋಸೇಫನು, "ನನ್ನ ಹತ್ತಿರಕ್ಕೆ ದಯಮಾಡಿ ಬನ್ನಿರಿ" ಎಂದು ಅಣ್ಣಂದಿರಿಗೆ ಹೇಳಲು ಅವರು ಹತ್ತಿರಕ್ಕೆ ಬಂದರು. ಅವನು ಅವರಿಗೆ "ಐಗುಪ್ತ ದೇಶಕ್ಕೆ ಮಾರಿಬಿಟ್ಟ ನಿಮ್ಮ ತಮ್ಮನಾದ ಯೋಸೇಫನು ನಾನೇ. 5 ನೀವು ನನ್ನನ್ನು ಹಾಗೆ ಮಾರಿದ್ದಕ್ಕಾಗಿ ವ್ಯಸನಪಟ್ಟು ದುಃಖಿಸಬೇಡಿರಿ. ಪ್ರಾಣ ಸಂರಕ್ಷಣೆಗಾಗಿ ದೇವರು ನನ್ನನ್ನು ನಿಮ್ಮ ಮುಂದೆ ಕಳುಹಿಸಿದನು.
15 ಇದಲ್ಲದೆ ಅವನು ತನ್ನ ಅಣ್ಣಂದಿರಲ್ಲಿ ಪ್ರತಿಯೊಬ್ಬನಿಗೂ ಮುದ್ದಿಟ್ಟು ಅವರನ್ನು ಅಪ್ಪಿಕೊಂಡು ಅತ್ತನು. ತರುವಾಯ ಅವರು ಅವನ ಸಂಗಡ ಮಾತನಾಡಿದರು.