5 ಮನುಷ್ಯರ ಕೆಟ್ಟತನವು ಭೂಮಿಯ ಮೇಲೆ ಹೆಚ್ಚಾಗಿರುವುದನ್ನೂ, ಅವರು ತಮ್ಮ ಹೃದಯದಲ್ಲಿ ಯೋಚಿಸುವುದೆಲ್ಲವು ಯಾವಾಗಲೂ ಕೆಟ್ಟ ಆಲೋಚನೆಗಳನ್ನೇ ಮಾಡುತ್ತಿರುವುದನ್ನು ಯೆಹೋವನು ನೋಡಿದನು. 6 ಯೆಹೋವನು ಭೂಮಿಯ ಮೇಲೆ ಮನುಷ್ಯರನ್ನು ಉಂಟುಮಾಡಿದ್ದಕ್ಕೆ ವ್ಯಥೆಪಟ್ಟು, ತನ್ನ ಹೃದಯದಲ್ಲಿ ನೊಂದುಕೊಂಡನು.
7 ಇದಲ್ಲದೆ ಯೆಹೋವನು, "ನಾನು ಸೃಷ್ಟಿಸಿದ ಮನುಷ್ಯ ಜಾತಿಯನ್ನು ಭೂಮಿಯ ಮೇಲಿನಿಂದ ಅಳಿಸಿಬಿಡುವೆನು; ಮನುಷ್ಯರೊಂದಿಗೆ ಸಕಲ ಕಾಡುಮೃಗ, ಕ್ರಿಮಿ, ಕೀಟ, ಪಕ್ಷಿಗಳನ್ನೂ ನಾಶ ಮಾಡುವೆನು. ನಾನು ಅವರನ್ನು ಸೃಷ್ಟಿಮಾಡಿದ್ದಕ್ಕೆ ದುಃಖವಾಗುತ್ತಿದೆ" ಎಂದು ದುಃಖಿಸಿದನು. 8 ಆದರೆ ನೋಹನ ನಡವಳಿಕೆ ಯೆಹೋವನಿಗೆ ಮೆಚ್ಚುಗೆಯಾದುದರಿಂದ ನೋಹನಿಗೆ ಯೆಹೋವನ ದಯೆ ದೊರಕಿತು.
ನೋಹನ ಚರಿತ್ರೆ
9 ನೋಹನ ಚರಿತ್ರೆ: ನೋಹನು ಸತ್ಯವಂತನೂ ಎಲ್ಲಾ ಜನರಲ್ಲಿ ನೀತಿವಂತನು ಆಗಿದ್ದನು; ಅವನು ದೇವರೊಂದಿಗೆ ಅನ್ಯೋನ್ಯವಾಗಿ ನಡೆದುಕೊಂಡನು.