15 ಆಗ ನಾನು ನಿಮ್ಮನ್ನೂ, ಎಲ್ಲಾ ಜೀವರಾಶಿಗಳನ್ನೂ ಕುರಿತು ಮಾಡಿದ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳುವೆನು. ಇನ್ನು ಮುಂದೆ ನೀರು ಹೆಚ್ಚಿ ಎಲ್ಲಾ ಭೂಜೀವಿಗಳನ್ನು ಹಾಳುಮಾಡುವ ಪ್ರಳಯವಾಗುವುದಿಲ್ಲ. 16 ಆ ಕಾಮನಬಿಲ್ಲು ಮೇಘಗಳಲ್ಲಿ ಕಾಣಿಸುವಾಗ ನಾನು ಅದನ್ನು ನೋಡಿ ದೇವರಾದ ನನಗೂ ಭೂಮಿಯ ಮೇಲಿರುವ ಎಲ್ಲಾ ಜೀವಜಂತುಗಳಿಗೂ ಆದ ಶಾಶ್ವತವಾದ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳುವೆನು" ಅಂದನು.
Publicidade