10 ನಮ್ಮ ಲೌಕಿಕ ತಂದೆಗಳು 12:10 ಅಥವಾ, ಕೆಲವು ದಿನಗಳ ತನಕ. ಮನಸ್ಸಿಗೆ ಸರಿದೋರಿದಂತೆ ಕೆಲವು ಕಾಲ ಮಾತ್ರ ನಮ್ಮನ್ನು ಶಿಕ್ಷಿಸಿದರು. ಆದರೆ 12:10 2 ಪೇತ್ರ. 1:4; ಯಾಜ 11:44:ದೇವರು ತನ್ನ ಪರಿಶುದ್ಧತೆಯಲ್ಲಿ ನಾವು ಪಾಲುಗಾರರಾಗಬೇಕೆಂದು ನಮ್ಮ ಹಿತಕ್ಕಾಗಿಯೇ ಶಿಕ್ಷಿಸುತ್ತಾನೆ. 11 ಯಾವ ಶಿಕ್ಷೆಯಾದರೂ 12:11 1 ಪೇತ್ರ. 1:6:ತತ್ಕಾಲಕ್ಕೆ ಸಂತೋಷಕರವಾಗಿ ತೋರದೆ, ದುಃಖಕರವಾಗಿ ತೋರುತ್ತದೆ. ಆದರೆ ಶಿಸ್ತಿನ ಅಭ್ಯಾಸವನ್ನು ಹೊಂದಿದವರು, ಮುಂದೆ 12:11 ಯಾಕೋಬ. 3:17,18:ಸಮಾಧಾನವುಳ್ಳ ನೀತಿಯ ಫಲವನ್ನು ಪಡೆಯುತ್ತಾರೆ.