1,2 ಆದಕಾರಣ ಇಷ್ಟು ಸಾಕ್ಷಿಗಳ ದೊಡ್ಡ ಗುಂಪು ಮೇಘದಂತೆ ನಮ್ಮ ಸುತ್ತಲು ಇರುವುದರಿಂದ ನಮಗೆ ಅಭ್ಯಂತರಪಡಿಸುವ ಎಲ್ಲಾ ಭಾರವನ್ನೂ, ಸುಲಭವಾಗಿ 12:1-2 ಎಫೆ 4:22:ಮುತ್ತಿಕೊಳ್ಳುವ ಪಾಪವನ್ನು ಸಹ ನಾವು ತೆಗೆದಿಟ್ಟು, 12:1-2 ಇಬ್ರಿ. 2:10:ನಂಬಿಕೆಯನ್ನು ಹುಟ್ಟಿಸುವಾತನೂ ಅದನ್ನು ಪರಿಪೂರ್ಣಗೊಳಿಸುವಾತನೂ ಆಗಿರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮಗೆ ನೇಮಕವಾದ 12:1-2 1 ಕೊರಿ 9:24:ಓಟವನ್ನು ಸಹನೆಯಿಂದ ಓಡೋಣ. 12:1-2 ಲೂಕ 24:26; ಫಿಲಿ. 2:8; ಯೆಶಾ 53:11:ಆತನು ತನ್ನ ಮುಂದೆ ಇಟ್ಟಿದ್ದ ಸಂತೋಷಕ್ಕೋಸ್ಕರ 12:1-2ಕೀರ್ತ 22:6,7; 69:19; ಯೆಶಾ 53:3:ಅಪಮಾನವನ್ನು ಅಲಕ್ಷ್ಯಮಾಡಿ, ಶಿಲುಬೆಯ ಮರಣವನ್ನು ಸಹಿಸಿಕೊಂಡು, 12:1-2ಇಬ್ರಿ. 1:3:ದೇವರ ಸಿಂಹಾಸನದ ಬಲಗಡೆಯಲ್ಲಿ ಆಸೀನನಾಗಿದ್ದಾನೆ. 3 ನೀವು ಮನಗುಂದಿದವರಾಗಿ 12:3 ಗಲಾ. 6:9:ಬೇಸರಗೊಳ್ಳದಂತೆ 12:3 ಮತ್ತಾ 10:24:ಯೇಸುವನ್ನು ಕುರಿತು ಯೋಚಿಸಿರಿ. 12:3 ಕೆಲವು ಪ್ರತಿಗಳಲ್ಲಿ, ಪಾಪಿಗಳು ತಮ್ಮ ಸ್ವಂತ ಹಾನಿಗೆ ಮಾಡಿದ ವಿರೋಧವನ್ನು ಎಷ್ಟಾಗಿ ಸಹಿಸಿಕೊಂಡನು ಎಂದು ಬರೆದದೆ. ಆತನು ಪಾಪಿಗಳಿಂದ ಎಷ್ಟೋ ವಿರೋಧವನ್ನು ಸಹಿಸಿಕೊಂಡನು. 4 ನೀವು ಪಾಪಕ್ಕೆ ವಿರೋಧವಾಗಿ ಹೋರಾಡುವುದರಲ್ಲಿ ರಕ್ತವನ್ನು ಸುರಿಸುವಷ್ಟು ಹೋರಾಡಲಿಲ್ಲವಲ್ಲ. 5 ಮಕ್ಕಳಿಗೆ ಹೇಳುವಂತೆ ನಿಮಗೆ ಹೇಳಿದ ಎಚ್ಚರಿಕೆಯ ಮಾತುಗಳನ್ನು ಮರೆತುಬಿಟ್ಟಿದ್ದೀರೋ? ಅದೇನೆಂದರೆ,
"ನನ್ನ 12:5 ಜ್ಞಾ. 3:11,12; ಯೋಬ 5:17:ಮಗನೇ, ಕರ್ತನ ಶಿಕ್ಷೆಯನ್ನು ಕಡೆಗಣಿಸಬೇಡ.
ಆತನು ನಿನ್ನನ್ನು ಗದರಿಸುವಾಗ ಬೇಸರಗೊಳ್ಳಬೇಡ."
6 ಏಕೆಂದರೆ 12:6 ಕೀರ್ತ 94:12; 119:67,75; ಪ್ರಕ 3:19:ಕರ್ತನು ಯಾರನ್ನು ಪ್ರೀತಿಸುತ್ತಾನೋ ಅವರನ್ನು ಶಿಕ್ಷಿಸುತ್ತಾನೆ.
ತಾನು ಮಗನಂತೆ ಸ್ವೀಕರಿಸುವ ಪ್ರತಿಯೊಬ್ಬನನ್ನು ದಂಡಿಸುತ್ತಾನೆ ಎಂಬುದಾಗಿದೆ.
7 ನಿಮ್ಮ ಶಿಸ್ತಿಗಾಗಿಯೇ, ನಿಮಗೆ ಶಿಕ್ಷೆಯಾಗುತ್ತದೆಂದು ಅದನ್ನು ಸಹಿಸಿಕೊಳ್ಳಿರಿ. 12:7 ಧರ್ಮೋ 8:5; 2 ಸಮು 7:14; ಜ್ಞಾ. 13:24:ದೇವರು ನಿಮ್ಮನ್ನು ಮಕ್ಕಳೆಂದು ನಡೆಸುತ್ತಾನೆ. ಯಾಕೆಂದರೆ ತಂದೆಯಿಂದ ಶಿಕ್ಷೆ ಹೊಂದದ ಮಗನೆಲ್ಲಿದ್ದಾನೆ? 8 ಎಲ್ಲರೂ ಪಾಲುಗಾರರಬೇಕಾದ 12:8 1 ಪೇತ್ರ. 5:9:ಶಿಕ್ಷೆಯು ನಿಮಗುಂಟಾಗದಿದ್ದರೆ ನೀವು ಹಾದರದಿಂದ ಹುಟ್ಟಿದವರೇ ಹೊರತು ಆತನ ಮಕ್ಕಳಲ್ಲ. 9 ಇದು ಮಾತ್ರವಲ್ಲದೆ ನಮ್ಮನ್ನು ಶಿಕ್ಷಿಸಿದ ಲೌಕಿಕ ತಂದೆಗಳನ್ನು ನಾವು ಸನ್ಮಾನಿಸಿತ್ತೇವಲ್ಲ. ನಮ್ಮ ಆತ್ಮಗಳಿಗೆ 12:9 ಅರಣ್ಯ 16:22:ತಂದೆಯಾಗಿರುವಾತನಿಗೆ ನಾವು ಇನ್ನೂ ಹೆಚ್ಚಾಗಿ ಅಧೀನರಾಗಿ 12:9 ಯೆಶಾ 38:16:ಜೀವಿಸಬೇಕಲ್ಲವೇ? 10 ನಮ್ಮ ಲೌಕಿಕ ತಂದೆಗಳು 12:10 ಅಥವಾ, ಕೆಲವು ದಿನಗಳ ತನಕ. ಮನಸ್ಸಿಗೆ ಸರಿದೋರಿದಂತೆ ಕೆಲವು ಕಾಲ ಮಾತ್ರ ನಮ್ಮನ್ನು ಶಿಕ್ಷಿಸಿದರು. ಆದರೆ 12:10 2 ಪೇತ್ರ. 1:4; ಯಾಜ 11:44:ದೇವರು ತನ್ನ ಪರಿಶುದ್ಧತೆಯಲ್ಲಿ ನಾವು ಪಾಲುಗಾರರಾಗಬೇಕೆಂದು ನಮ್ಮ ಹಿತಕ್ಕಾಗಿಯೇ ಶಿಕ್ಷಿಸುತ್ತಾನೆ. 11 ಯಾವ ಶಿಕ್ಷೆಯಾದರೂ 12:11 1 ಪೇತ್ರ. 1:6:ತತ್ಕಾಲಕ್ಕೆ ಸಂತೋಷಕರವಾಗಿ ತೋರದೆ, ದುಃಖಕರವಾಗಿ ತೋರುತ್ತದೆ. ಆದರೆ ಶಿಸ್ತಿನ ಅಭ್ಯಾಸವನ್ನು ಹೊಂದಿದವರು, ಮುಂದೆ 12:11 ಯಾಕೋಬ. 3:17,18:ಸಮಾಧಾನವುಳ್ಳ ನೀತಿಯ ಫಲವನ್ನು ಪಡೆಯುತ್ತಾರೆ. 12 ಆದುದ್ದರಿಂದ 12:12 ಯೆಶಾ 35:3; ಯೋಬ. 4:3,4:ಜೋಲುಬಿದ್ದ ಕೈಗಳನ್ನೂ ಮತ್ತು ನಡುಗುವ ಮೊಣಕಾಲುಗಳನ್ನೂ ಬಲಪಡಿಸಿರಿ. 13 12:13 ಜ್ಞಾ. 4:26,27:ನಿಮ್ಮ ಪಾದಗಳಿಗೆ ನೇರವಾದ ದಾರಿಯನ್ನು ಮಾಡಿಕೊಳ್ಳಿರಿ. ಹೀಗೆ ಮಾಡಿದರೆ ಕುಂಟುವ ಕಾಲು ಉಳುಕಿ ಹೋಗದೇ ವಾಸಿಯಾಗುವುದು.
14 12:14 ರೋಮಾ. 14:19: ಎಲ್ಲರೊಂದಿಗೆ ಸಮಾಧಾನದಿಂದ ಜೀವಿಸಲು ಮತ್ತು 12:14 1 ಥೆಸ. 4:7:ಪರಿಶುದ್ಧರಾಗಿರಲು ಪ್ರಯತ್ನಮಾಡಿರಿ. ಪರಿಶುದ್ಧತೆಯಿಲ್ಲದೆ ಯಾವನೂ ಕರ್ತನನ್ನು ಕಾಣುವುದಿಲ್ಲ. 15 ನಿಮ್ಮಲ್ಲಿ ಯಾವನೂ 12:15 ಇಬ್ರಿ. 4:1; 2 ಕೊರಿ 6:1; ಗಲಾ. 5:4:ದೇವರ ಕೃಪೆಯಿಂದ ತಪ್ಪಿ ಹಿಂಜಾರಿ ಹೋಗದಂತೆಯೂ, 12:15 ಧರ್ಮೋ 29:18; ಅ. ಕೃ. 8:23:ಯಾವ ಕಹಿಯಾದ ಬೇರೂ ನಿಮ್ಮಲ್ಲಿ ಚಿಗುರಿ ಅಸಮಾಧಾನವನ್ನು ಹುಟ್ಟಿಸಿ ಅನೇಕರನ್ನು ಮಲಿನಪಡಿಸದಂತೆ ನೋಡಿಕೊಳ್ಳಿರಿ. 16 ಯಾವ ಜಾರನಾಗಲಿ, ಏಸಾವನಂಥ ಪ್ರಾಪಂಚಿಕನಾಗಲಿ ನಿಮ್ಮಲ್ಲಿ ಇರದಂತೆ ಜಾಗ್ರತೆ ವಹಿಸಿಕೊಳ್ಳಿರಿ. 12:16 ಆದಿ 25:33:ಆ ಏಸಾವನು ಒಂದೇ ಒಂದು ಊಟಕ್ಕೋಸ್ಕರ ತನ್ನ ಚೊಚ್ಚಲುತನದ ಹಕ್ಕನ್ನು ಮಾರಿಬಿಟ್ಟನು. 17 12:17 ಆದಿ 27:34,36,38.ಅನಂತರದಲ್ಲಿ ತನ್ನ ತಂದೆಯ ಆಶೀರ್ವಾದವನ್ನು ಬಾಧ್ಯವಾಗಿ ಹೊಂದಬೇಕೆಂದು ಕಣ್ಣೀರು ಸುರಿಸುತ್ತಾ ಬೇಡಿಕೊಂಡರೂ, ಪಶ್ಚಾತ್ತಾಪಕ್ಕೆ 12:17 ಅಥವಾ. ಮಾನಸಾಂತರಕ್ಕೆ. ಮಾರ್ಗವಿಲ್ಲದೆ ನಿರಾಕರಿಸಲ್ಪಟ್ಟನೆಂದು ನೀವು ಬಲ್ಲವರಾಗಿದ್ದೀರಿ.
18,19 ನೀವು 12:18-19 ವಿಮೋ 19:18; 20:18; ಧರ್ಮೋ 4:11; 5:22:ಮುಟ್ಟಬಹುದಾದ ಮತ್ತು ಬೆಂಕಿ ಹೊತ್ತಿದಂಥ ಬೆಟ್ಟಕ್ಕೂ, ಕಾರ್ಮೋಡ, ಕಗ್ಗತ್ತಲೆ, ಬಿರುಗಾಳಿ, 12:18-19 ವಿಮೋ 19:16,19:ತುತ್ತೂರಿಯ ಶಬ್ದ, ಮಾತುಗಳ ಧ್ವನಿ ಎಂಬಿವುಗಳ ಬಳಿಗಲ್ಲ ನೀವು ಬಂದಿರುವುದು. ಆ ಧ್ವನಿಯನ್ನು ಕೇಳಿದವರು ಇನ್ನೆಂದಿಗೂ ಆ ಧ್ವನಿ 12:18-19 ವಿಮೋ 20:19; ಧರ್ಮೋ 5:5,23,25; 18:16: ತಮ್ಮೊಂದಿಗೆ ಮಾತನಾಡುವುದೇ ಬೇಡವೆಂದು ಕೇಳಿಕೊಂಡರು. 20 ಏಕೆಂದರೆ, 12:20 ವಿಮೋ 19:12,13:"ಒಂದು ಮೃಗವಾದರೂ ಬೆಟ್ಟವನ್ನು ಮುಟ್ಟಿದರೆ ಅದನ್ನು ಕಲ್ಲೆಸೆದು ಕೊಲ್ಲಬೇಕೆಂಬ" ವಿಧಿಯನ್ನು ಅವರಿಂದ ತಾಳಲಾಗಲಿಲ್ಲ. 21 ಇದಲ್ಲದೆ ಆ ದೃಶ್ಯವು ಅತಿ ಭಯಾನಕವಾಗಿದ್ದದರಿಂದ ಮೋಶೆಯು, 12:21 ವಿಮೋ 19:16; ಧರ್ಮೋ 9:19:"ನಾನು ಹೆದರಿ, ನಡುಗುತ್ತಿದ್ದೇನೆ" ಎಂದು ಹೇಳಿದನು.
22 ಆದರೆ ನೀವು 12:22 ಪ್ರಕ 14:1:ಚೀಯೋನ್ ಪರ್ವತಕ್ಕೂ, ಜೀವಸ್ವರೂಪನಾದ ದೇವರ ಪಟ್ಟಣವಾಗಿರುವ 12:22 ಗಲಾ. 4:26:ಪರಲೋಕದ ಯೆರೂಸಲೇಮಿಗೂ, ಉತ್ಸವ ಸಂಘದಲ್ಲಿ ಕೂಡಿರುವ 12:22 ಯೂದ. 14:ಕೋಟ್ಯಾನುಕೋಟಿ ದೇವದೂತರ ಬಳಿಗೂ, 23 ಪರಲೋಕದಲ್ಲಿ 12:23 ಲೂಕ 10:20:ಹೆಸರು ಬರೆಸಿಕೊಂಡಿರುವ 12:23 ಇಬ್ರಿ. 2:12:ಚೊಚ್ಚಲ ಮಕ್ಕಳ ಸಭೆಗೂ, 12:23 ಆದಿ 18:25; ಕೀರ್ತ 58:11:ಎಲ್ಲರಿಗೆ ನ್ಯಾಯಾಧಿಪತಿಯಾಗಿರುವ ದೇವರ ಬಳಿಗೂ, ಪರಿಪೂರ್ಣರಾಗಿರುವ ನೀತಿವಂತರ ಆತ್ಮಗಳ ಬಳಿಗೂ, 24 12:24 ಇಬ್ರಿ. 8:6; 9:15ಹೊಸ ಒಡಂಬಡಿಕೆಗೆ ಮಧ್ಯಸ್ಥನಾಗಿರುವ ಯೇಸುವಿನ ಬಳಿಗೂ, 12:24 ಇಬ್ರಿ. 11:4; ಆದಿ 4:10:ಹೇಬೆಲನ ರಕ್ತಕ್ಕಿಂತ ಉತ್ತಮವಾಗಿ ಮಾತನಾಡುವ 12:24 ಇಬ್ರಿ. 10:22:ಪ್ರೋಕ್ಷಣ ರಕ್ತದ ಬಳಿಗೂ ಬಂದಿದ್ದೀರಿ. 25 ಮಾತನಾಡುತ್ತಿರುವಾತನನ್ನು ನೀವು ಅಸಡ್ಡೆ ಮಾಡದಂತೆ ನೋಡಿಕೊಳ್ಳಿರಿ. ಏಕೆಂದರೆ 12:25 ಅರಣ್ಯ 16:24-35; ಇಬ್ರಿ. 2:3:ಭೂಮಿಯ ಮೇಲೆ ದೈವೋಕ್ತಿಗಳನ್ನಾಡಿದವನನ್ನು ಅಸಡ್ಡೆಮಾಡಿದವರು ದಂಡನೆಗೆ ತಪ್ಪಿಸಿಕೊಳ್ಳಲಾಗದಿದ್ದರೆ, ಪರಲೋಕದಿಂದ ಮಾತನಾಡುವಾತನನ್ನು ಬಿಟ್ಟು ದೂರವಾಗಿ ನಾವು ಹೋದರೆ ದಂಡನೆಯಿಂದ ಹೇಗೆ ತಪ್ಪಿಸಿಕೊಂಡೆವು? 26 12:26 ವಿಮೋ 19:18:ಆತನ ಧ್ವನಿಯು ಆಗ ಭೂಮಿಯನ್ನು ಕದಲಿಸಿತು. ಈಗಲಾದರೋ ಆತನು, 12:26 ಹಗ್ಗಾ. 2:6:"ಇನ್ನೊಂದೇ ಸಾರಿ ನಾನು ಭೂಮಿಯನ್ನು ಮಾತ್ರವಲ್ಲದೆ ಪರಲೋಕವನ್ನೂ ಕದಲಿಸುತ್ತೇನೆ" ಎಂದು ವಾಗ್ದಾನಮಾಡಿ ಹೇಳಿದ್ದಾನೆ. 27 "ಇನ್ನೊಂದೇ ಸಾರಿ," ಎಂಬ ಈ ಮಾತನ್ನು ಯೋಚಿಸಿದರೆ, ಕದಲಿಸಿರುವ ವಸ್ತುಗಳು ನಿರ್ಮಿತವಾದವುಗಳಾದ್ದರಿಂದ ತೆಗೆದುಹಾಕಲ್ಪಡುತ್ತವೆಂಬುದು ಸ್ಪಷ್ಟವಾಗುತ್ತದೆ. 12:27 ಕೀರ್ತ 102:26:ಆಗ, ಕದಲಿಸದೇ ಇರುವ ವಸ್ತುಗಳು ಸ್ಥಿರವಾಗಿ ನಿಲ್ಲುವವು. 28 ಆದ್ದರಿಂದ 12:28 ದಾನಿ. 2:44:ಯಾರೂ ಕದಲಿಸಲಾರದ ರಾಜ್ಯವನ್ನು ಪಡೆದುಕೊಳ್ಳುವವರಾದ ನಾವು 12:28 ಅಥವಾ, ದೇವರ ಕೃಪೆಯನ್ನು ಹಿಡಿದುಕೊಂಡು. ಕೃತಜ್ಞತೆಯುಳ್ಳವರಾಗಿ, ಆತನಿಗೆ ಸಮರ್ಪಕವಾದ ಆರಾಧನೆಯನ್ನು ಭಕ್ತಿಯಿಂದಲೂ ಮತ್ತು ಭಯದಿಂದಲೂ ಮಾಡೋಣ. 29 ಏಕೆಂದರೆ 12:29 ಧರ್ಮೋ 4:24; 2 ಥೆಸ. 1:8:ನಮ್ಮ ದೇವರು ದಹಿಸುವ ಅಗ್ನಿಯಾಗಿದ್ದಾನೆ.