6 ಆದರೆ ಯೇಸು ಕ್ರಿಸ್ತನು ಅದಕ್ಕಿಂತ 8:6 ಇಬ್ರಿ. 1:4; 2 ಕೊರಿ 3:6-11:ಶ್ರೇಷ್ಠವಾದ ಉತ್ತಮ ಸೇವೆಯನ್ನು ಹೊಂದಿದವನಾಗಿದ್ದಾನೆ, ಯಾಕೆಂದರೆ ಈತನು ಉತ್ತಮ ವಾಗ್ದಾನಗಳ ಮೇಲೆ ಸ್ಥಾಪಿತವಾದ 8:6 ಇಬ್ರಿ. 7:22:ಉತ್ತಮವಾದ ಒಡಂಬಡಿಕೆಗೆ ಮಧ್ಯಸ್ಥನಾಗಿದ್ದಾನೆ.
7 8:7 ಇಬ್ರಿ. 7:11: ಆ ಮೊದಲನೆಯ ಒಡಂಬಡಿಕೆಯು ದೋಷವಿಲ್ಲದ್ದಾಗಿದ್ದರೆ, ಎರಡನೆಯ ಒಡಂಬಡಿಕೆಯ ಅಗತ್ಯವಿರುತ್ತಿರಲಿಲ್ಲ. 8 ಆದರೆ ದೇವರು ಆ ಜನರಲ್ಲಿ ತಪ್ಪು ಹೊರಿಸಿ ಹೀಗೆಂದನು,
8:8 ಯೆರೆ 31:31-34: "‘ಇಗೋ, ನಾನು ಇಸ್ರಾಯೇಲ್ ವಂಶದವರೊಂದಿಗೂ ಯೆಹೂದ ವಂಶದವರೊಂದಿಗೂ
ಹೊಸದಾಗಿರುವ ಒಂದು ಒಡಂಬಡಿಕೆಯನ್ನು ಮಾಡಿಕೊಳ್ಳುವ ದಿನಗಳು ಬರುವವು’ ಎಂದು ಕರ್ತನು ಹೇಳುತ್ತಾನೆ.
9 ‘ಈ ಒಡಂಬಡಿಕೆಯು ನಾನು ಇವರ ಪೂರ್ವಿಕರನ್ನು ಕೈಹಿಡಿದು ಐಗುಪ್ತ ದೇಶದೊಳಗಿನಿಂದ ಕರೆದುಕೊಂಡು ಬಂದ ದಿನದಲ್ಲಿ ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯ ಹಾಗಲ್ಲ.
ಏಕೆಂದರೆ ಅವರು ನನ್ನ ಒಡಂಬಡಿಕೆಯಲ್ಲಿ ಸ್ಥಿರವಾಗಿ ನಿಲ್ಲಲಿಲ್ಲವಾದ್ದರಿಂದ ನಾನು ಅವರನ್ನು ಲಕ್ಷಿಸಲಿಲ್ಲ’ ಎಂದು ಕರ್ತನು ಹೇಳುತ್ತಾನೆ.
10 8:10 ಇಬ್ರಿ. 10:16; ರೋಮಾ. 11:27: ‘ಆ ದಿನಗಳ ತರುವಾಯ ನಾನು ಇಸ್ರಾಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು’ ಹೀಗಿರುವುದು,
‘ನಾನು ನನ್ನ ಆಜ್ಞೆಗಳನ್ನು ಅವರ ಮನಸ್ಸಿನಲ್ಲಿ ಇಡುವೆನು.
ನಾನು 8:10 2 ಕೊರಿ 3:3:ಅವರ ಹೃದಯಗಳ ಮೇಲೆ ಅವುಗಳನ್ನು ಬರೆಯುವೆನು.
ನಾನು ಅವರಿಗೆ ದೇವರಾಗಿರುವೆನು.
ಅವರು ನನ್ನ ಜನರಾಗಿರುವರು.
11 ಇದಲ್ಲದೆ ಪ್ರತಿಯೊಬ್ಬನು ತನ್ನ ನೆರೆಯವನಿಗೂ ತನ್ನ ಸಹೋದರನಿಗೂ
"ಕರ್ತನನ್ನು ತಿಳಿದುಕೊಳ್ಳಿರಿ" ಎಂದು ಬೋಧಿಸಬೇಕಾಗಿರುವುದಿಲ್ಲ.
ಏಕೆಂದರೆ 8:11 ಯೆಶಾ 54:13; ಯೋಹಾ 6:45; 1 ಯೋಹಾ 2:27:ಹೀನರಾದವರು ಮೊದಲುಗೊಂಡು ಉನ್ನತರಾದವರ ತನಕ ಎಲ್ಲರೂ ನನ್ನನ್ನು ತಿಳಿದುಕೊಂಡಿರುವರು.
12 ನಾನು ಅವರ ದುಷ್ಕೃತ್ಯಗಳನ್ನು ಕರುಣೆಯಿಂದ ಕ್ಷಮಿಸುವೆನು
ಮತ್ತು 8:12 ಇಬ್ರಿ. 10:17; ರೋಮಾ. 11:27:ಅವರ ಪಾಪಗಳನ್ನು ಎಂದಿಗೂ ನೆನಪಿಗೆ ತಂದುಕೊಳ್ಳುವುದಿಲ್ಲ’" ಎಂದು ಕರ್ತನು ನುಡಿಯುತ್ತಾನೆ.
13 ಆತನು "ಹೊಸತು" ಎಂದು ಹೇಳಿದ್ದರಲ್ಲಿ ಮೊದಲಿದ್ದ ಒಡಂಬಡಿಕೆಯನ್ನು 8:13 2 ಕೊರಿ 5:17:ಹಳೆಯದಾಗಿ ಮಾಡಿದ್ದಾನೆ. ಅದು ಹಳೆಯದಾಗುತ್ತಾ ಅಳಿದುಹೋಗುವುದಕ್ಕೆ ಸಮೀಪವಾಗಿದೆ.