2 ಯೆಹೋವನೇ, ನಾನು ಎಷ್ಟು ಕಾಲ ನಿನಗೆ ಸಹಾಯಕ್ಕಾಗಿ ಮೊರೆಯಿಡುತ್ತಿರಬೇಕು? ನೀನು ಎಷ್ಟು ಕಾಲ ಕೇಳದೇ ಇರುವಿ?
ಹಿಂಸೆ, ಹಿಂಸೆ ಎಂದು ನಿನ್ನನ್ನು ಕೂಗಿಕೊಂಡರೂ ರಕ್ಷಿಸದೇ ಇರುವಿ.
3 ಕೇಡನ್ನೇ ನನ್ನ ಕಣ್ಣಿಗೆ ಏಕೆ ಕಾಣಿಸುವಂತೆ ಮಾಡಿದ್ದಿ? ಕಷ್ಟವನ್ನೇಕೆ ಅನುಭವಿಸುವಂತೆ ಮಾಡಿರುವೆ?
ಹಿಂಸೆಬಾಧೆಗಳು ನನ್ನ ಕಣ್ಣೆದುರಿಗೆ ಇದ್ದೇ ಇವೆ; ಜಗಳವಾಗುತ್ತಿದೆ ವ್ಯಾಜ್ಯವೇಳುತ್ತಿದೆ.