ಯೆಹೋವನು ಕೋರೆಷನನ್ನು ಕರೆದ ಉದ್ದೇಶ
1 ಯೆಹೋವನು ಯಾರ ಕೈಹಿಡಿದು, ಯಾರ ಎದುರಿಗೆ ಜನಾಂಗಗಳನ್ನು ತುಳಿದು,
ರಾಜರ ನಡುಕಟ್ಟನ್ನು ಬಿಚ್ಚಿ,
ಯಾರ ಮುಂದೆ ಹೆಬ್ಬಾಗಿಲುಗಳನ್ನು ತೆರೆದು, ಮುಚ್ಚಲ್ಲಿಲ್ಲವೋ, ತಾನು ಅಭಿಷೇಕಿಸಿದ ಆ ಕೋರೆಷನಿಗೆ ಹೀಗೆನ್ನುತ್ತಾನೆ,
2 "ನಾನು ನಿನ್ನ ಮುಂದೆ ಹೋಗಿ, ದಿಣ್ಣೆಗಳನ್ನು ಸಮಮಾಡುವೆನು.
ತಾಮ್ರದ ಕದಗಳನ್ನು ಒಡೆದು, ಕಬ್ಬಿಣದ ಅಗುಳಿಗಳನ್ನು ಮುರಿದುಬಿಡುವೆನು.
3 ನಿನ್ನ ಹೆಸರು ಹಿಡಿದು ಕರೆಯುವ ಯೆಹೋವನು ನಾನೇ. ಇಸ್ರಾಯೇಲರ ದೇವರು ಎಂದು ನೀನು ತಿಳಿದುಕೊಳ್ಳುವ ಹಾಗೆ
ಕತ್ತಲಲ್ಲಿ ಬಚ್ಚಿಟ್ಟಿರುವ ಆಸ್ತಿಯನ್ನೂ, ಗುಪ್ತಸ್ಥಳಗಳಲ್ಲಿ ಮರೆಮಾಡಿದ ನಿಧಿನಿಕ್ಷೇಪವನ್ನೂ ನಿನಗೆ ಕೊಡುವೆನು.