3 ಯಾಕೋಬವಂಶವೇ, ಇಸ್ರಾಯೇಲ್ ಮನೆತೆನದವರಲ್ಲಿ ಉಳಿದ ಸಂತಾನವೇ,
ನಿಮ್ಮನ್ನು ಗರ್ಭದಿಂದ ಹೊತ್ತು, ಹುಟ್ಟಿದಂದಿನಿಂದ ಪಾಲಿಸುತ್ತಿದ್ದ ನನ್ನ ಮಾತಿಗೆ ಕಿವಿಗೊಡಿರಿ.
4 ನಿಮ್ಮ ಮುಪ್ಪಿನ ತನಕ ನಾನೇ ಆಧಾರ, ನರೆ ಬಂದಾಗಲೂ ನಿಮ್ಮನ್ನು ಹೊತ್ತು ಸಹಿಸುವೆನು.
ನಾನೇ ಉಂಟುಮಾಡಿದೆನು, ನಾನೇ ಹೊರುವೆನು. ಹೌದು, ನಿಮ್ಮನ್ನು ಹೊತ್ತು ಸಹಿಸಿ ನಿರ್ವಹಿಸುವೆನು.