ಯೆಹೋವನ ಕರೆ
1 "ಎಲೈ, ಬಾಯಾರಿದ ಸಕಲಜನರೇ, ನೀರಿನ ಬಳಿಗೆ ಬನ್ನಿರಿ, ಹಣವಿಲ್ಲದವನು ಸಹ ಬರಲಿ!
ಬನ್ನಿರಿ, ಕೊಂಡುಕೊಳ್ಳಿರಿ, ಊಟ ಮಾಡಿರಿ! ಬಂದು ದ್ರಾಕ್ಷಾರಸವನ್ನೂ, ಹಾಲನ್ನೂ ಹಣಕೊಡದೆ, ಕ್ರಯವಿಲ್ಲದೆ ತೆಗೆದುಕೊಳ್ಳಿರಿ.
2 ಆಹಾರವಲ್ಲದ್ದಕ್ಕೆ ಹಣವನ್ನು ಏಕೆ ವ್ಯರ್ಥ ಮಾಡುತ್ತೀರಿ? ತೃಪ್ತಿಗೊಳಿಸದ ಪದಾರ್ಥಕ್ಕೆ ನಿಮ್ಮ ದುಡಿತವನ್ನು ವೆಚ್ಚಮಾಡುವುದೇಕೆ?
ಕಿವಿಗೊಟ್ಟು ನನ್ನ ಮಾತನ್ನು ಕೇಳಿರಿ, ಒಳ್ಳೆಯದನ್ನೇ ಉಂಡು ಮೃಷ್ಟಾನ್ನದಲ್ಲಿ ಆನಂದಪಡಿರಿ.
6 ಯೆಹೋವನು ಸಿಕ್ಕುವ ಕಾಲದಲ್ಲಿ ಆತನನ್ನು ಆಶ್ರಯಿಸಿರಿ,
ಆತನು ಸಮೀಪದಲ್ಲಿರುವಾಗ ಆತನಿಗೆ ಬಿನ್ನಹಮಾಡಿರಿ.
7 ದುಷ್ಟನು ತನ್ನ ದುರ್ಮಾರ್ಗವನ್ನು ಬಿಡಲಿ, ಕೆಡುಕನು ತನ್ನ ದುರಾಲೋಚನೆಗಳನ್ನು ತ್ಯಜಿಸಲಿ;
ಯೆಹೋವನ ಕಡೆಗೆ ತಿರುಗಿಕೊಂಡು ಬರಲಿ, ಆತನು ಅವನನ್ನು ಕರುಣಿಸುವನು;
ನಮ್ಮ ದೇವರನ್ನು ಆಶ್ರಯಿಸಲಿ, ಆತನು ಮಹಾಕೃಪೆಯಿಂದ ಕ್ಷಮಿಸುವನು.