21 ನಾನಂತೂ ಅವರೊಂದಿಗೆ ಈ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು, ನೋಡಿರಿ;
"ನಿಮ್ಮಲ್ಲಿ ಪ್ರವೇಶಿಸಿರುವ ನನ್ನ ಆತ್ಮವೂ, ನಿಮ್ಮ ಬಾಯಿಗೆ ನಾನು ಕೊಟ್ಟಿರುವ ಮಾತುಗಳೂ,
ನಿಮ್ಮ ಬಾಯಿಂದಾಗಲಿ, ನಿಮ್ಮ ಸಂತತಿಯ ಬಾಯಿಂದಾಗಲಿ ಅಥವಾ ನಿಮ್ಮ ಸಂತತಿಯ ಸಂತಾನದ ಬಾಯಿಂದಾಗಲಿ ಇಂದಿನಿಂದ ಎಂದಿಗೂ ತೊಲಗುವುದಿಲ್ಲ" ಎಂದು ಯೆಹೋವನು ಹೇಳುತ್ತಾನೆ.