ಯೆರೂಸಲೇಮಿನ ಮುಂದಿನ ಮಹಾವೈಭವವು
1 ಏಳು, ಪ್ರಕಾಶಿಸು, ನಿನಗೆ ಬೆಳಕು ಬಂತು, ಯೆಹೋವನ ತೇಜಸ್ಸು ನಿನ್ನ ಮೇಲೆ ಉದಯಿಸಿದೆ.
2 ಇಗೋ, ಕತ್ತಲು ಭೂಮಿಯನ್ನು ಆವರಿಸಿದೆ, ಕಾರ್ಗತ್ತಲು ಜನಾಂಗಗಳನ್ನು ಮುಚ್ಚಿದೆ;
ನಿನ್ನ ಮೇಲಾದರೋ ಯೆಹೋವನು ಉದಯಿಸುವನು, ಆತನ ತೇಜಸ್ಸು ನಿನ್ನಲ್ಲಿ ಕಾಣಿಸುವುದು.
3 ಜನಾಂಗಗಳು ನಿನ್ನ ಬೆಳಕಿಗೆ ನೆರೆದು ಬರುವವು, ಅರಸರೂ ನಿನ್ನಲ್ಲಿನ ಉದಯಪ್ರಕಾಶಕ್ಕೆ ಸೇರುವರು.