Pular para o conteúdo
Publicidade

ಯೆಶಾಯನು 60:19,20

IRVKAN Indian Revised Version (IRV) - Kannada - 2019

19 ಇನ್ನು ಮೇಲೆ ಹಗಲಿನಲ್ಲಿ ನಿನಗಿರುವ ಪ್ರಕಾಶವು ಸೂರ್ಯನದಲ್ಲ; ಚಂದ್ರನು ನಿನ್ನ ಬೆಳಕಿಗಾಗಿ ಎಂದಿಗೂ ಕಳೆಗುಂದುವುದಿಲ್ಲ;

ಯೆಹೋವನೇ ನಿನಗೆ ನಿತ್ಯಪ್ರಕಾಶವು, ನಿನ್ನ ದೇವರೇ ನಿನಗೆ ತೇಜಸ್ಸು.

20 ನಿನ್ನ ಸೂರ್ಯನು ಇನ್ನು ಮುಳುಗನು, ನಿನ್ನ ಚಂದ್ರನು ತೊಲಗನು;

ಯೆಹೋವನೇ ನಿನಗೆ ನಿತ್ಯಪ್ರಕಾಶವಾಗಿರುವನು, ನೀನು ದುಃಖಿಸುವ ದಿನಗಳು ಕೊನೆಯಾಗುವುದು.

Em outras traduções

  1. OKCV Kannada Contemporary Version

    19 ಇನ್ನು ಮೇಲೆ ಸೂರ್ಯನು ನಿನಗೆ ಹಗಲಿನಲ್ಲಿ ಬೆಳಕಾಗಿರುವುದಿಲ್ಲ.

    ಚಂದ್ರನು ಪ್ರಕಾಶಕ್ಕಾಗಿ ನಿನಗೆ ಬೆಳಕು ಕೊಡುವುದಿಲ್ಲ.

    ಆದರೆ ಯೆಹೋವ ದೇವರು ನಿನಗೆ ನಿತ್ಯವಾದ ಬೆಳಕಾಗಿರುವರು.

    ನಿನ್ನ ದೇವರು ನಿನ್ನ ಬೆಳಗುವ ತೇಜಸ್ಸಾಗಿರುವರು.

    20 ನಿನ್ನ ಸೂರ್ಯನು ಅಸ್ತಮಿಸುವುದಿಲ್ಲ.

    ನಿನ್ನ ಚಂದ್ರನು ಕಾಣದೆ ಹೋಗುವುದಿಲ್ಲ.

    ಏಕೆಂದರೆ ಯೆಹೋವ ದೇವರು ನಿನಗೆ

    ನಿತ್ಯವಾದ ಬೆಳಕಾಗಿರುವರು. ನೀನು ದುಃಖಿಸುವ ದಿನಗಳು ಸಮಾಪ್ತಿಯಾಗುವುದು.

Direitos das traduções citadas

Estes versículos te tocaram? Ore agora!

+581 estão orando agora.

Junte-se à corrente de oração.