Pular para o conteúdo
Publicidade

ಯೋಬನು 23

ಯೋಬನ ಎಂಟನೆಯ ಸಂಭಾಷಣೆ: ಎಲೀಫಜನಿಗೆ ನೀಡಿದ ಪ್ರತ್ಯುತ್ತರ

1 ಆಗ ಯೋಬನು ಇಂತೆಂದನು,

2 "ನಾನು ನನ್ನ ನರಳಾಟವನ್ನು ಎಷ್ಟು ಬಿಗಿಹಿಡಿದರೂ;

ಆ ನನ್ನ ಮುಲುಗುವಿಕೆಯು ದೇವದ್ರೋಹವೆಂದು ಈಗಲೂ ಎಣಿಸುತ್ತೀರಾ?

3 ಆಹಾ, ಆತನ ದರ್ಶನವು ಎಲ್ಲಿ ಆದೀತು, ನನಗೆ ಗೊತ್ತಾಗಿದ್ದರೆ ಎಷ್ಟೋ ಸಂತೋಷ!

ಆತನ ಸನ್ನಿಧಿಯನ್ನು ಸೇರೆನು.

4 ನನ್ನ ಬಾಯಿಯನ್ನು ತರ್ಕಗಳಿಂದ ತುಂಬಿಸಿಕೊಂಡು

ನನ್ನ ನ್ಯಾಯವನ್ನು ಆತನ ಮುಂದೆ ವಿವರಿಸುವೆನು.

5 ಆತನ ಪ್ರತ್ಯುತ್ತರದ ಮಾತುಗಳನ್ನು ತಿಳಿದುಕೊಂಡು

ಆತನು ನನಗೆ ಹೇಳುವುದನ್ನು ವಿವೇಚಿಸುವೆನು.

6 ಆತನು ತನ್ನ ಮಹಾಶಕ್ತಿಯಿಂದ ನನ್ನ ಸಂಗಡ ವ್ಯಾಜ್ಯವಾಡುವನೋ?

ಇಲ್ಲವೇ ಇಲ್ಲ; ನನ್ನ ವಿಜ್ಞಾಪನೆಯನ್ನು ಗಮನಿಸುವನು.

7 ಅಲ್ಲಿ ಯಥಾರ್ಥಚಿತ್ತನು ಆತನೊಂದಿಗೆ ವಾದಿಸುವನು.

ನನ್ನ ನ್ಯಾಯಾಧಿಪತಿಯಿಂದ ನನಗೆ ನಿತ್ಯವಾದ ಬಿಡುಗಡೆಯಾಗುವುದು.

8 ಅಯ್ಯೋ, ನಾನು ಮುಂದೆ ಹೋದರೂ ಆತನು ಸಿಕ್ಕುವುದಿಲ್ಲ,

ಹಿಂದೆ ಹೋದರೂ ಆತನನ್ನು ತಿಳಿಯಲಾರೆನು.

9 ಎಡಗಡೆಯಲ್ಲಿ ಹುಡುಕಿದರೂ ನೋಡಲಾರೆನು,

ಬಲಗಡೆಗೆ ತಿರುಗಿಕೊಂಡರೂ ಆತನು ಕಾಣಿಸುವುದಿಲ್ಲ.

10 ಆತನಾದರೋ ನನ್ನ ದಾರಿಯನ್ನು ಬಲ್ಲನು,

ಆತನೇ ನನ್ನನ್ನು ಶೋಧಿಸಿ ನೋಡಿದರೆ ಚೊಕ್ಕ ಬಂಗಾರವಾಗಿ ಕಾಣಿಸುವೆನು.

11 ಆತನ ಹೆಜ್ಜೆಯ ಜಾಡಿನಲ್ಲೇ ಕಾಲಿಟ್ಟಿದ್ದೇನೆ,

ಓರೆಯಾಗದೆ ಆತನ ದಾರಿಯನ್ನೇ ಹಿಡಿದಿದ್ದೇನೆ.

12 ಆತನ ತುಟಿಗಳಿಂದ ಹೊರಟ ನಿಯಮಗಳಿಗೆ ನಾನು ಹಿಂದೆಗೆಯಲಿಲ್ಲ,

ಆತನ ಬಾಯಿಂದ ಬಂದ ಮಾತುಗಳನ್ನು ಎದೆಯಲ್ಲಿ ನಿಧಿಯನ್ನಾಗಿ ಬಚ್ಚಿಟ್ಟುಕೊಂಡಿದ್ದೇನೆ.

13 ಆತನಂತು ಒಂದೇ ಮನಸ್ಸುಳ್ಳವನಾಗಿದ್ದಾನೆ, ತಿರುಗಿಸಬಲ್ಲವರು ಯಾರು?

ತಾನು ಬಯಸಿದ್ದನ್ನೇ ಮಾಡುತ್ತಾನೆ.

14 ನನ್ನ ವಿಷಯದಲ್ಲಿ ನೇಮಕವಾದದ್ದನ್ನು ಪೂರೈಸುವವನಷ್ಟೆ,

ಆತನಲ್ಲಿ ಇಂಥಾ ಸಂಕಲ್ಪಗಳು ಅನೇಕವಾಗಿವೆ.

15 ಆದಕಾರಣ ನಾನು ಆತನ ಸನ್ನಿಧಿಯಲ್ಲಿ ಗಾಬರಿಯಾಗಿದ್ದೇನೆ;

ಇದನ್ನೆಲ್ಲಾ ಯೋಚಿಸಿಕೊಳ್ಳುವಾಗ ಆತನಿಗೆ ಹೆದರುತ್ತೇನೆ.

16 ನನ್ನ ಹೃದಯವನ್ನು ಕುಂದಿಸಿದವನು ದೇವರೇ,

ನನ್ನನ್ನು ಗಾಬರಿಪಡಿಸಿದವನು ಸರ್ವಶಕ್ತನಾದ ದೇವರೇ.

17 ನಾನು ಹಾಳಾದದ್ದಕ್ಕೆ ಈ ಅಂಧಕಾರವು ಕಾರಣವಲ್ಲ,

ನನ್ನ ಮುಖವನ್ನು ಕವಿದಿರುವ ಕಾರ್ಗತ್ತಲು ಕಾರಣವಲ್ಲ."

Estes versículos te tocaram? Ore agora!

+581 estão orando agora.

Junte-se à corrente de oração.