4 ನಾನು ಲೋಕಕ್ಕೆ ಅಸ್ತಿವಾರ ಹಾಕಿದಾಗ ನೀನು ಎಲ್ಲಿದ್ದಿ?
ನೀನು ಜ್ಞಾನಿಯಾಗಿದ್ದರೆ ಹೇಳು.
5 ಅದರ ಅಳತೆಗಳನ್ನು ಯಾರು ಗೊತ್ತುಮಾಡಿದರು? ನೀನೇ ಬಲ್ಲೆ.
ಅದರ ಮೇಲೆ ನೂಲುಹಿಡಿದವರು ಯಾರು?
8 ಸಮುದ್ರವು ಭೂಗರ್ಭವನ್ನು ಭೇದಿಸಿಕೊಂಡು ಬರಲು,
ಅದರ ದ್ವಾರಗಳನ್ನು ಮುಚ್ಚಿದವರು ಯಾರು?
12 ನಿನ್ನ ಜೀವಮಾನದಲ್ಲಿ ಎಂದಾದರೂ ‘ಅರುಣೋದಯವಾಗಲಿ’ ಎಂದು ಆಜ್ಞಾಪಿಸಿರುವೆಯೋ?
ಮುಂಜಾನೆಯ ಬೆಳಗಿಗೆ ಇರತಕ್ಕ ಸ್ಥಳವನ್ನು ಗೊತ್ತುಮಾಡಿದೆಯಾ?
31 ನೀನು ಕೃತ್ತಿಕೆಯ ಸರಪಣಿಯನ್ನು ಬಿಗಿದು,
ಮೃಗಶಿರದ ಸಂಕೋಲೆಯನ್ನು ಬಿಚ್ಚುವೆಯಾ?