Pular para o conteúdo
Publicidade

ಯೋನನು 2

ಯೋನನ ಪ್ರಾರ್ಥನೆ

1 ಯೋನನು ಆ ಮೀನಿನ ಹೊಟ್ಟೆಯೊಳಗೆ ಇದ್ದು ಕೊಂಡು ತನ್ನ ದೇವರಾದ ಯೆಹೋವನಿಗೆ ಹೀಗೆ ಪ್ರಾರ್ಥನೆ ಮಾಡಿದನು:

2 "ಕಷ್ಟದಲ್ಲಿ ನಾನು ಯೆಹೋವನಿಗೆ ಮೊರೆಯಿಟ್ಟೆನು;

ಆತನು ನನಗೆ ಸದುತ್ತರವನ್ನು ದಯಪಾಲಿಸಿದನು;

ಪಾತಾಳದ ಗರ್ಭದೊಳಗಿಂದ ಸಹಾಯಕ್ಕಾಗಿ ಕೂಗಿಕೊಂಡೆನು!

ಆಹಾ, ನೀನು ನನ್ನ ಸ್ವರವನ್ನು ಲಾಲಿಸಿದೆ.

3 ನನ್ನನ್ನು ಸಮುದ್ರದ ಅಗಾಧಸ್ಥಳದಲ್ಲಿ ಹಾಕಿದ್ದೀಯಲ್ಲಾ;

ಪ್ರವಾಹವು ನನ್ನನ್ನು ಸುತ್ತಿಕೊಂಡಿತು;

ಲೆಕ್ಕವಿಲ್ಲದ ಸಮುದ್ರದ ಅಲೆಗಳೂ, ತೆರೆಗಳೂ ನನ್ನ ಮೇಲೆ ದಾಟಿ ಹೋದವು

4 ‘ನಿನ್ನ ಸಾನ್ನಿಧ್ಯದಿಂದ ತಳ್ಳಲ್ಪಟ್ಟಿದ್ದೇನೆ ಎಂದುಕೊಂಡೆನು;

ನಾನು ನಿನ್ನ ಪರಿಶುದ್ಧ ಮಂದಿರದ ಕಡೆಗೆ ಪುನಃ ಹೇಗೆ ನೋಡುವೆನು?’

5 ಜಲರಾಶಿಯು ನನ್ನನ್ನು ಮುತ್ತಿ ನನ್ನ ಪ್ರಾಣಕ್ಕೆ ಹಾನಿ ತಂದಿತು,

ಮಹಾಸಾಗರವು ನನ್ನನ್ನು ಆವರಿಸಿತು,

ಕಡಲಕಳೆಯು ನನ್ನ ತಲೆಯನ್ನು ಸುತ್ತಿಕೊಂಡಿತು.

6 ಪರ್ವತಗಳ ತಳಹದಿಗೆ ಇಳಿದುಹೋದೆನು,

ಭೂಲೋಕದ ದ್ವಾರಗಳ ಚಿಲಕಗಳು ಎಂದಿಗೂ ತೆಗೆಯದ ಹಾಗೆ ನನ್ನನ್ನು ಬಂಧಿಸಿದವು;

ನನ್ನ ದೇವರಾದ ಯೆಹೋವನೇ, ನೀನು ನನ್ನ ಪ್ರಾಣವನ್ನು ಅಧೋಲೋಕದೊಳಗಿನಿಂದ ಉದ್ಧರಿಸಿದ್ದೀ.

7 "ನನ್ನ ಆತ್ಮವು ನನ್ನಲ್ಲಿ ಕುಂದಿಹೋದಾಗ ಯೆಹೋವನಾದ ನಿನ್ನನ್ನು ನೆನಪು ಮಾಡಿಕೊಂಡು ಸ್ಮರಿಸಿದೆನು;

ನನ್ನ ಬಿನ್ನಹವು ನಿನಗೆ ಮುಟ್ಟಿತು, ಅದು ನಿನ್ನ ಪರಿಶುದ್ಧಾಲಯವನ್ನು ಬಂದು ಸೇರಿತು.

8 "ನಿರ್ಜೀವ ವಿಗ್ರಹಗಳನ್ನು ಅವಲಂಬಿಸಿದವರು

ತಮ್ಮ ದೇವರ ಕರುಣಾನಿಧಿಯನ್ನು ತೊರೆದುಬಿಡುವರು.

9 ಆದರೆ ನಾನು ಸ್ತೋತ್ರ ಧ್ವನಿಯಿಂದ ನಿನಗೆ ಯಜ್ಞವನ್ನರ್ಪಿಸುವೆನು,

ನಿನಗೆ ಮಾಡಿಕೊಂಡ ಹರಕೆಯನ್ನು ಸಲ್ಲಿಸುವೆನು.

ರಕ್ಷಣೆಯು ಯೆಹೋವನಿಂದಲೇ ಉಂಟಾಗುವುದು."

10 ಆಗ ಯೆಹೋವನು ಮೀನಿಗೆ ಅಪ್ಪಣೆಕೊಡಲು ಅದು ಯೋನನನ್ನು ಸಮುದ್ರದ ದಡದಲ್ಲಿ ಕಾರಿಬಿಟ್ಟಿತು.

Estes versículos te tocaram? Ore agora!

+581 estão orando agora.

Junte-se à corrente de oração.

Jonas
Ver todos os capítulos de Jonas