ಯೋನನ ಪ್ರಾರ್ಥನೆ
1 ಯೋನನು ಆ ಮೀನಿನ ಹೊಟ್ಟೆಯೊಳಗೆ ಇದ್ದು ಕೊಂಡು ತನ್ನ ದೇವರಾದ ಯೆಹೋವನಿಗೆ ಹೀಗೆ ಪ್ರಾರ್ಥನೆ ಮಾಡಿದನು:
2 "ಕಷ್ಟದಲ್ಲಿ ನಾನು ಯೆಹೋವನಿಗೆ ಮೊರೆಯಿಟ್ಟೆನು;
ಆತನು ನನಗೆ ಸದುತ್ತರವನ್ನು ದಯಪಾಲಿಸಿದನು;
ಪಾತಾಳದ ಗರ್ಭದೊಳಗಿಂದ ಸಹಾಯಕ್ಕಾಗಿ ಕೂಗಿಕೊಂಡೆನು!
ಆಹಾ, ನೀನು ನನ್ನ ಸ್ವರವನ್ನು ಲಾಲಿಸಿದೆ.