ಅನಾದಿಯಿಂದ ಇದ್ದ ದೇವರ ವಾಕ್ಯವು ಸಂಪೂರ್ಣ ಮನುಷ್ಯನಾಗಿದ್ದು
1 1:1 ಆದಿ 1:1; 1 ಯೋಹಾ 1:1: ಆದಿಯಲ್ಲಿ ವಾಕ್ಯವಿತ್ತು; ಆ ವಾಕ್ಯವು ದೇವರೊಂದಿಗಿತ್ತು; ಆ ವಾಕ್ಯವು ದೇವರಾಗಿತ್ತು. 2 ಆ ವಾಕ್ಯವೆಂಬಾತನು ಆದಿಯಲ್ಲಿ ದೇವರೊಂದಿಗಿದ್ದನು. 3 ಸಮಸ್ತವೂ ಆತನ ಮೂಲಕವಾಗಿ ಸೃಷ್ಟಿಯಾಯಿತು. ಸೃಷ್ಟಿಯಾದ ಎಲ್ಲವುಗಳಲ್ಲಿ ಆತನಿಲ್ಲದೆ ಒಂದಾದರೂ ಸೃಷ್ಟಿಯಾಗಲಿಲ್ಲ.