17 10:17 ಫಿಲಿ. 2:9:ತಂದೆಯು ನನ್ನನ್ನು ಪ್ರೀತಿಸುತ್ತಾನೆ ಏಕೆಂದರೆ, ನಾನು ನನ್ನ ಪ್ರಾಣವನ್ನು ಮರಳಿ ಪಡೆದುಕೊಳ್ಳುವಂತೆ ಅದನ್ನು ಕೊಡುತ್ತಿದ್ದೇನೆ. 18 ನನ್ನ ಪ್ರಾಣವನ್ನು ಯಾರೂ ನನ್ನಿಂದ ತೆಗೆದುಕೊಳ್ಳುವುದಿಲ್ಲ. ಆದರೆ ನನ್ನಷ್ಟಕ್ಕೆ ನಾನೇ ಅದನ್ನು ಕೊಡುತ್ತೇನೆ. ಅದನ್ನು ಕೊಡುವುದಕ್ಕೆ ನನಗೆ ಅಧಿಕಾರ ಉಂಟು. ಅದನ್ನು ಪುನಃ ಪಡೆದುಕೊಳ್ಳುವುದಕ್ಕೂ ನನಗೆ ಅಧಿಕಾರವಿದೆ. ಈ ಆಜ್ಞೆಯನ್ನು ನಾನು ನನ್ನ ತಂದೆಯಿಂದ ಹೊಂದಿದ್ದೇನೆ" ಎಂದನು.