ಲಾಜರನ ಮರಣ
1 ಮಾರ್ಥಳು ಮತ್ತು ಆಕೆಯ ಸಹೋದರಿಯಾದ, ಮರಿಯಳ ಊರಾದ, ಬೇಥಾನ್ಯದಲ್ಲಿ ಲಾಜರನೆಂಬುವನೊಬ್ಬನು ಅಸ್ವಸ್ಥನಾಗಿದ್ದನು. 2 11:2 ಯೋಹಾ 12:3; ಮತ್ತಾ 26:7; ಮಾರ್ಕ 14:3:ಈ ಮರಿಯಳು ಕರ್ತನಿಗೆ ತೈಲವನ್ನು ಹಚ್ಚಿ ಆತನ ಪಾದಗಳನ್ನು ತನ್ನ ತಲೆ ಕೂದಲಿನಿಂದ ಒರಸಿದವಳು. ಈಕೆಯ ಸಹೋದರನಾದ ಲಾಜರನೇ ಅಸ್ವಸ್ಥನಾಗಿದ್ದನು. 3 ಹೀಗಿರಲಾಗಿ ಅವನ ಸಹೋದರಿಯರು, "ಕರ್ತನೇ ಇಗೋ, ನೀನು ಪ್ರೀತಿಸುವವನು ಅಸ್ವಸ್ಥನಾಗಿದ್ದಾನೆ" ಎಂಬುದಾಗಿ ಯೇಸುವಿನ ಬಳಿಗೆ ಹೇಳಿ ಕಳುಹಿಸಿದರು. 4 ಯೇಸು ಇದನ್ನು ಕೇಳಿ, "ಈ ರೋಗವು ಮರಣಕ್ಕಾಗಿ ಬಂದದ್ದಲ್ಲ; ಇದರಿಂದ ದೇವಕುಮಾರನಿಗೆ ಮಹಿಮೆ ಉಂಟಾಗುವಂತೆ ದೇವರ ಮಹಿಮೆಗೋಸ್ಕರ ಬಂದದ್ದು" ಎಂದು ಹೇಳಿದನು. 5 ಮಾರ್ಥಳನ್ನು ಆಕೆಯ ತಂಗಿಯನ್ನು ಮತ್ತು ಲಾಜರನನ್ನು ಯೇಸು ಪ್ರೀತಿಸುತ್ತಿದ್ದನು. 6 ಲಾಜರನು ಅಸ್ವಸ್ಥನಾಗಿದ್ದಾನೆಂದು ಆತನು ಕೇಳಿದ ಮೇಲೆಯೂ ಎರಡು ದಿನ ತಾನಿದ್ದ ಸ್ಥಳದಲ್ಲೇ ಉಳಿದುಕೊಂಡನು. 7 ಬಳಿಕ ಆತನು ತನ್ನ ಶಿಷ್ಯರಿಗೆ, "ನಾವು ಪುನಃ ಯೂದಾಯಕ್ಕೆ ಹೋಗೋಣ" ಎಂದು ಹೇಳಿದನು. 8 ಆತನ ಶಿಷ್ಯರು ಆತನಿಗೆ, "ಗುರುವೇ, ಆಗಲೇ 11:8 ಯೋಹಾ 8:59; 10:31:ಯೆಹೂದ್ಯರು ನಿನ್ನ ಮೇಲೆ ಕಲ್ಲೆಸೆಯಬೇಕೆಂದು ಹುಡುಕುತ್ತಿದ್ದಾರೆ, ಪುನಃ ನೀನು ಅಲ್ಲಿಗೆ ಹೋಗಬೇಕೆಂದಿರುವಿಯಾ?" ಎಂದರು. 9 ಯೇಸು, "ಹಗಲಿಗೆ ಹನ್ನೆರಡು ತಾಸುಗಳು ಉಂಟಲ್ಲವೇ? ಒಬ್ಬನು ಹಗಲಿನಲ್ಲಿ ನಡೆದರೆ, ಈ ಲೋಕದ ಬೆಳಕು ಕಾಣಿಸುವುದರಿಂದ ಅವನು ಎಡವುದಿಲ್ಲ. 10 ರಾತ್ರಿಯಲ್ಲಿ ನಡೆದರೆ ತನ್ನಲ್ಲಿ ಬೆಳಕಿಲ್ಲದ್ದರಿಂದ ಅವನು ಎಡವುತ್ತಾನೆ" ಎಂದು ಉತ್ತರಕೊಟ್ಟನು. 11 ಇದನ್ನು ಹೇಳಿದ ಮೇಲೆ ಆತನು ಅವರಿಗೆ, "ನಮ್ಮ ಮಿತ್ರನಾದ ಲಾಜರನು ನಿದ್ರೆ ಮಾಡುತ್ತಿದ್ದಾನೆ, ಆದುದರಿಂದ ನಾನು ಹೋಗಿ ಅವನನ್ನು ನಿದ್ರೆಯಿಂದ ಎಬ್ಬಿಸಬೇಕಾಗಿದೆ" ಎಂದು ಹೇಳಿದನು. 12 ಅದಕ್ಕೆ ಶಿಷ್ಯರು, "ಅವನು ನಿದ್ರೆ ಮಾಡುತ್ತಿದ್ದರೆ ಸ್ವಸ್ಥನಾಗುವನು" ಎಂದರು. 13 ಯೇಸು ಅವನ ಮರಣವನ್ನು ಕುರಿತು ಅದನ್ನು ಹೇಳಿದ್ದನು, ಆದರೆ ಅವರು ವಿಶ್ರಾಂತಿಗಾಗಿ ಮಲಗಿದ್ದಾನೆಂಬುದಾಗಿ ಹೇಳಿದನೆಂದು ಯೋಚಿಸಿದರು. 14 ಆಗ ಯೇಸು ಸ್ಪಷ್ಟವಾಗಿ ಅವರಿಗೆ, "ಲಾಜರನು ಸತ್ತು ಹೋಗಿದ್ದಾನೆ.