ಯೇಸು ಯೆರೂಸಲೇಮಿನಲ್ಲಿ ಅರಸನಂತೆ ಪ್ರವೇಶಿಸಿದ್ದು
12 ಮರುದಿನ ಹಬ್ಬಕ್ಕೆ ಬಂದಿದ್ದ ಜನರ ಗುಂಪು ಯೇಸು ಯೆರೂಸಲೇಮಿಗೆ ಬರುತ್ತಾನೆಂಬ ಸುದ್ದಿ ಕೇಳಿ 13 ಖರ್ಜೂರದ ಗರಿಗಳನ್ನು ತೆಗೆದುಕೊಂಡು, ಆತನನ್ನು ಎದುರುಗೊಳ್ಳುವುದಕ್ಕೆ ಊರಿನಿಂದ ಹೊರಗೆ ಬಂದು, 12:13 ಮೂಲ: ಹೊಸನ್ನ, ಎಂದರೆ "ದೇವರು ನಮ್ಮನ್ನು ರಕ್ಷಿಸಲಿ" ಎಂದರ್ಥ. ಕೀರ್ತ 118:25, 26:"ಹೊಸನ್ನ! ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದ; ಇಸ್ರಾಯೇಲಿನ ಅರಸನಿಗೆ ಶುಭವಾಗಲಿ" ಎಂದು ಆರ್ಭಟಿಸಿದರು. 14 ಯೇಸು ದಾರಿಯಲ್ಲಿ ಪ್ರಾಯದ ಕತ್ತೆಯೊಂದನ್ನು ಕಂಡು ಅದರ ಮೇಲೆ ಕುಳಿತುಕೊಂಡನು. 15 ಹೀಗೆ, 12:15 ಜೆಕ. 9:9:"ಚೀಯೋನ್ ನಗರಿಯೇ, ಹೆದರಬೇಡ ಇಗೋ, ನಿನ್ನ ಅರಸನು ಕತ್ತೆಮರಿಯ ಮೇಲೆ ಕುಳಿತುಕೊಂಡು ಬರುತ್ತಿದ್ದಾನೆ" ಎಂಬ ಧರ್ಮಶಾಸ್ತ್ರದ ಮಾತು ನೆರವೇರಿತು. 16 ಇದು ಆತನ ಶಿಷ್ಯರಿಗೆ ಮೊದಲು ತಿಳಿಯಲಿಲ್ಲ. ಆದರೆ ಯೇಸು ತನ್ನ ಮಹಿಮೆಯನ್ನು ಹೊಂದಿದ ಮೇಲೆ ಇದು ಆತನ ವಿಷಯವಾಗಿ ಬರೆದಿರುವಂತೆಯೇ, ಇವುಗಳನ್ನು ಆತನಿಗೆ ಮಾಡಿದೆವೆಂದೂ ನೆನಪು ಮಾಡಿಕೊಂಡರು. 17 ಇದಲ್ಲದೆ ಆತನು ಲಾಜರನನ್ನು ಸಮಾಧಿಯೊಳಗಿಂದ ಕರೆದು ಅವನನ್ನು ಸತ್ತವರೊಳಗಿಂದ ಎಬ್ಬಿಸಿದಾಗ ಆತನ ಸಂಗಡ ಇದ್ದ ಜನರೇ ಈ ವಿಷಯಕ್ಕೆ ಸಾಕ್ಷಿಕೊಡುತ್ತಿದ್ದರು. 18 ಆತನು ಈ ಸೂಚಕಕಾರ್ಯವನ್ನು ಮಾಡಿದನೆಂದು ಕೇಳಿದ ಕಾರಣದಿಂದಲೂ ಜನರು ಆತನನ್ನು ಸಂಧಿಸಲು ಬಂದರು. 19 ಹೀಗಿರಲಾಗಿ ಫರಿಸಾಯರು, "ನಮ್ಮ ಯತ್ನವೇನೂ ನಡೆಯಲಿಲ್ಲ ನೋಡಿರಿ, ಲೋಕವೆಲ್ಲಾ ಆತನ ಹಿಂದೆ ಹೋಯಿತಲ್ಲಾ" ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.