13 14:13 ಯೋಹಾ 15:16; 16:23,24:ಇದಲ್ಲದೆ ನೀವು ನನ್ನ ಹೆಸರಿನಲ್ಲಿ ಏನೇನು ಬೇಡಿಕೊಳ್ಳುವಿರೋ ಅದನ್ನು ನಾನು ನೆರವೇರಿಸುವೆನು. ಹೀಗೆ ಮಗನ ಮೂಲಕವಾಗಿ ತಂದೆಗೆ ಮಹಿಮೆ ಉಂಟಾಗುವುದು. 14 ನೀವು ನನ್ನ ಹೆಸರಿನಲ್ಲಿ ನನ್ನನ್ನು ಏನಾದರೂ ಬೇಡಿಕೊಂಡರೆ ನಾನು ಅದನ್ನು ನೆರವೇರಿಸುವೆನು.
15 "ನೀವು ನನ್ನನ್ನು ಪ್ರೀತಿಸುವವರಾದರೆ ನನ್ನ ಆಜ್ಞೆಗಳನ್ನು ಕೈಕೊಂಡು ನಡೆಯುವಿರಿ. 16 ಆಗ ನಾನು ತಂದೆಯನ್ನು ಕೇಳಿಕೊಳ್ಳುವೆನು, ಆತನು ನಿಮಗೆ ಬೇರೊಬ್ಬ ಸಹಾಯಕನನ್ನು ಸದಾಕಾಲವೂ ನಿಮ್ಮೊಂದಿಗೆ ಇರುವುದಕ್ಕೆ ಕಳುಹಿಸಿ ಕೊಡುವನು.