9 ಯೇಸು ಅವನಿಗೆ, "ಫಿಲಿಪ್ಪನೇ, ನಾನು ಇಷ್ಟು ಕಾಲ ನಿಮ್ಮ ಜೊತೆಯಲ್ಲಿಯೇ ಇದ್ದರೂ ಇನ್ನೂ ನೀನು ನನ್ನನ್ನು ತಿಳಿಯಲಿಲ್ಲವೇ! ನನ್ನನ್ನು ನೋಡಿದವನು ತಂದೆಯನ್ನು ನೋಡಿದ್ದಾನೆ, ಮತ್ತು ನಮಗೆ ತಂದೆಯನ್ನು ತೋರಿಸು ಎಂದು ನೀನು ಹೇಳುವುದಾದರು ಹೇಗೆ? 10 ನಾನು ತಂದೆಯಲ್ಲಿ ಇದ್ದೇನೆ ಮತ್ತು ತಂದೆಯು ನನ್ನಲ್ಲಿ ಇದ್ದಾನೆ ಎಂಬುದನ್ನು ನೀನು ನಂಬುವುದಿಲ್ಲವೋ? ನಾನು ನಿಮಗೆ ಹೇಳುವ ಮಾತುಗಳನ್ನು ನನ್ನಷ್ಟಕ್ಕೆ ನಾನೇ ಆಡುವುದಿಲ್ಲ; ತಂದೆಯು ನನ್ನಲ್ಲಿ ಇದ್ದುಕೊಂಡು ತನ್ನ ಕಾರ್ಯಗಳನ್ನು ಮಾಡುತ್ತಾನೆ.