7 ಆದರೂ ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ, ನಾನು ಹೋಗುವುದು ನಿಮಗೆ ಒಳ್ಳೆಯದು, ಹೇಗೆಂದರೆ ನಾನು ಹೋಗದಿದ್ದರೆ 16:7 ಯೋಹಾ 15:26:ಆ ಸಹಾಯಕನು ನಿಮ್ಮ ಬಳಿಗೆ ಬರುವುದಿಲ್ಲ. ನಾನು ಹೋದರೆ ಆತನನ್ನು ನಿಮ್ಮ ಬಳಿಗೆ ಕಳುಹಿಸಿಕೊಡುತ್ತೇನೆ.
13 ಆದರೆ 16:13 ಯೋಹಾ 14:17:ಸತ್ಯದ ಆತ್ಮನು ಬರುವಾಗ ಆತನು ನಿಮ್ಮನ್ನು ಪೂರ್ಣ ಸತ್ಯದ ಕಡೆಗೆ ನಡೆಸುವನು. ಆತನು ತನ್ನಷ್ಟಕ್ಕೆ ತಾನೇ ಮಾತನಾಡದೆ ಕೇಳಿದ ಮಾತುಗಳನ್ನೇ ಆಡುವನು ಮತ್ತು ಮುಂದೆ ನಡೆಯುವ ಸಂಗತಿಗಳನ್ನು ನಿಮಗೆ ತಿಳಿಸುವನು.