8 ಆತನು ಬಂದಾಗ ಪಾಪ, ನೀತಿ ಮತ್ತು ನ್ಯಾಯತೀರ್ಪಿನ ಕುರಿತು ಲೋಕಕ್ಕೆ ಮನವರಿಕೆಯನ್ನು ಉಂಟುಮಾಡುವನು. 9 ಅವರು ನನ್ನನ್ನು ನಂಬದೇ ಇರುವುದರಿಂದ ಪಾಪದ ಕುರಿತಾಗಿಯೂ 10 ನಾನು ನನ್ನ ತಂದೆಯ ಬಳಿಗೆ ಹೋಗಿ, ಇನ್ನು ಮೇಲೆ ನಿಮಗೆ ಕಾಣಿಸದೆ ಇರುವುದರಿಂದ ನೀತಿಯ ಕುರಿತಾಗಿಯೂ, 11 16:11 ಯೋಹಾ 12:31:ಇಹಲೋಕಾಧಿಪತಿಗೆ ನ್ಯಾಯತೀರ್ಪಾಗಿರುವುದರಿಂದ ನ್ಯಾಯತೀರ್ಪಿನ ಕುರಿತಾಗಿಯೂ, ಲೋಕಕ್ಕೆ ಮನವರಿಕೆಯನ್ನು ಉಂಟುಮಾಡುವನು.