15 ಇವರನ್ನು ಲೋಕದಿಂದ ತೆಗೆಯಬೇಕೆಂದು ನಾನು ಬೇಡಿಕೊಳ್ಳುವುದಿಲ್ಲ, ಆದರೆ ಇವರನ್ನು ಕೆಡುಕನಿಂದ ಕಾಪಾಡಬೇಕೆಂದು ನಾನು ಬೇಡಿಕೊಳ್ಳುತ್ತೇನೆ. 16 ನಾನು ಲೋಕದವನಲ್ಲದೆ ಇರುವಂತೆ ಇವರೂ ಲೋಕದವರಲ್ಲ. 17 ನೀನು ಸತ್ಯದಿಂದ ಇವರನ್ನು ಪ್ರತಿಷ್ಠೆಪಡಿಸು, ನಿನ್ನ ವಾಕ್ಯವೇ ಸತ್ಯ. 18 17:18 ಯೋಹಾ 20:21:ನೀನು ನನ್ನನ್ನು ಲೋಕಕ್ಕೆ ಕಳುಹಿಸಿದಂತೆಯೇ, ನಾನು ಸಹ ಇವರನ್ನು ಲೋಕಕ್ಕೆ ಕಳುಹಿಸಿದ್ದೇನೆ.