ಯೇಸು ಎಲ್ಲಾ ವಿಶ್ವಾಸಿಗಳಿಗಾಗಿ ಪ್ರಾರ್ಥಿಸಿದ್ದು
20 "ಆದರೆ ಇವರಿಗೋಸ್ಕರ ಮಾತ್ರವಲ್ಲದೆ ಇವರ ವಾಕ್ಯದಿಂದ ನನ್ನನ್ನು ನಂಬುವವರಿಗೋಸ್ಕರವಾಗಿಯೂ ನಿನ್ನನ್ನು ಬೇಡಿಕೊಳ್ಳುತ್ತೇನೆ. 21 ತಂದೆಯೇ, ನೀನು ನನ್ನಲ್ಲಿಯೂ ನಾನು ನಿನ್ನಲ್ಲಿಯೂ ಇರುವ ಹಾಗೆಯೇ 17:21 1 ಯೋಹಾ 1:3:ಅವರು ಸಹ ಒಂದಾಗಿರಬೇಕೆಂತಲೂ ಬೇಡಿಕೊಳ್ಳುತ್ತೇನೆ. ನೀನು ನನ್ನನ್ನು ಕಳುಹಿಸಿದ್ದೀ ಎಂದು ಲೋಕವು ನಂಬುವುದಕ್ಕಾಗಿ, ಅವರೆಲ್ಲರೂ ನಮ್ಮಲ್ಲಿ ಒಂದಾಗಿರಲಿ ಎಂದು ನಿನ್ನನ್ನು ಕೇಳಿಕೊಳ್ಳುತ್ತೇನೆ. 22 ನಾವು ಒಂದಾಗಿರುವ ಹಾಗೆಯೇ ಇವರೂ ಒಂದಾಗಿರಬೇಕೆಂದು ನೀನು ನನಗೆ ಕೊಟ್ಟಿರುವ ಮಹಿಮೆಯನ್ನು ನಾನು ಇವರಿಗೆ ಕೊಟ್ಟಿದ್ದೇನೆ. 23 ನಾನು ಇವರಲ್ಲಿಯೂ ನೀನು ನನ್ನಲ್ಲಿಯೂ ಇರುವಂತೆ ಇವರೂ ಐಕ್ಯತೆಯಲ್ಲಿ ಪರಿಪೂರ್ಣರಾಗಿರಲಿ. ಹೀಗೆ ನೀನು ನನ್ನನ್ನು ಕಳುಹಿಸಿದ್ದೀ, ಎಂದೂ ಮತ್ತು ನೀನು ನನ್ನನ್ನು ಪ್ರೀತಿಸಿದಂತೆ, ಇವರನ್ನೂ ನೀನು ಪ್ರೀತಿಸುತ್ತೀ ಎಂದು ಲೋಕವು ತಿಳಿದುಕೊಳ್ಳುವುದು.