10 ಪಿಲಾತನು, "ನೀನು ನನ್ನೊಡನೆ ಮಾತನಾಡುವುದಿಲ್ಲವೋ? ನಿನ್ನನ್ನು ಬಿಡಿಸುವ ಅಧಿಕಾರವೂ ಮತ್ತು ನಿನ್ನನ್ನು ಶಿಲುಬೆಗೆ ಹಾಕಿಸುವ ಅಧಿಕಾರವೂ ನನಗೆ ಉಂಟೆಂಬುದು ನಿನಗೆ ಗೊತ್ತಿಲ್ಲವೋ?" ಎಂದು ಆತನನ್ನು ಕೇಳಿದನು. 11 ಅದಕ್ಕೆ ಯೇಸು, "ಮೇಲಿನಿಂದ ನಿನಗೆ ಕೊಡಲ್ಪಡದಿದ್ದರೆ ನನ್ನ ಮೇಲೆ ನಿನಗೆ ಯಾವ ಅಧಿಕಾರವೂ ಇರುತ್ತಿರಲಿಲ್ಲ. ಆದಕಾರಣ ನನ್ನನ್ನು ನಿನಗೆ ಒಪ್ಪಿಸಿದವನಿಗೆ ಹೆಚ್ಚಿನ ಪಾಪವಿದೆ" ಎಂದು ಉತ್ತರ ಕೊಟ್ಟನು.
Publicidade