17 ಯೇಸು ಆಕೆಗೆ, "ನನ್ನನ್ನು ಮುಟ್ಟಬೇಡ, ಏಕೆಂದರೆ ನಾನು ಇನ್ನೂ ತಂದೆಯ ಬಳಿಗೆ ಏರಿಹೋದವನಲ್ಲ. ಆದರೆ ನೀನು ನನ್ನ ಸಹೋದರರ ಬಳಿಗೆ ಹೋಗಿ ಅವರಿಗೆ, ನನ್ನ ತಂದೆಯೂ, ನಿಮ್ಮ ತಂದೆಯೂ, ನನ್ನ ದೇವರೂ, ನಿಮ್ಮ ದೇವರೂ ಆಗಿರುವಾತನ ಬಳಿಗೆ ನಾನು ಏರಿಹೋಗುತ್ತೇನೆ ಎಂದು ತಿಳಿಸು" ಎಂದನು. 18 ಮಗ್ದಲದ ಮರಿಯಳು ಹೋಗಿ "ನಾನು ಕರ್ತನನ್ನು ನೋಡಿದ್ದೇನೆ," ಆತನು ಇಂಥಿಂಥದನ್ನು ನನಗೆ ಹೇಳಿದನು ಎಂದು ಶಿಷ್ಯರಿಗೆ ತಿಳಿಸಿದಳು.
Publicidade