19 ಅದೇ ದಿನ ಎಂದರೆ ವಾರದ ಮೊದಲನೆಯ ದಿನದ ಸಂಜೆಯಲ್ಲಿ ಶಿಷ್ಯರು ಯೆಹೂದ್ಯರ ಭಯದಿಂದ ತಾವು ಇದ್ದ ಮನೆಯ ಬಾಗಿಲುಗಳನ್ನು ಮುಚ್ಚಿಕೊಂಡಿರಲು, ಆಗ ಯೇಸು ಬಂದು ಅವರ ನಡುವೆ ನಿಂತು, "ನಿಮಗೆ 20:19 ಅಥವಾ, ಶುಭವಾಗಲಿ. ಸಮಾಧಾನವಾಗಲಿ" ಎಂದನು. 20 ಇದನ್ನು ಹೇಳಿದ ಮೇಲೆ ಅವರಿಗೆ ತನ್ನ ಕೈಗಳನ್ನೂ ಪಕ್ಕೆಯನ್ನೂ ತೋರಿಸಿದನು. ಆಗ ಶಿಷ್ಯರು ಕರ್ತನನ್ನು ನೋಡಿ ಸಂತೋಷಪಟ್ಟರು. 21 ಯೇಸು ಅವರಿಗೆ, "ನಿಮಗೆ ಸಮಾಧಾನವಾಗಲಿ" ಎಂದು ಪುನಃ ಹೇಳಿ, "ತಂದೆಯು ನನ್ನನ್ನು ಕಳುಹಿಸಿಕೊಟ್ಟ ಹಾಗೆಯೇ ನಾನೂ ನಿಮ್ಮನ್ನು ಕಳುಹಿಸಿಕೊಡುತ್ತೇನೆ" ಎಂದನು. 22 ಆತನು ಇದನ್ನು ಹೇಳಿ ಅವರ ಮೇಲೆ ಉಸಿರೂದಿ ಅವರಿಗೆ, "ನೀವು ಪವಿತ್ರಾತ್ಮನನ್ನು ಪಡೆದುಕೊಳ್ಳಿರಿ. 23 ನೀವು ಯಾರ ಪಾಪಗಳನ್ನು ಕ್ಷಮಿಸಿಬಿಡುತ್ತೀರೋ, ಅವರಿಗೆ ಅವುಗಳು ಕ್ಷಮಾಪಣೆಯಾಗುತ್ತದೆ; ಯಾರ ಪಾಪಗಳನ್ನು ನೀವು ಕ್ಷಮಿಸದೇ ಉಳಿಸುತ್ತೀರೋ, ಅವರಿಗೆ ಅವುಗಳು ಉಳಿಯುತ್ತವೆ" ಎಂದು ಹೇಳಿದನು.