29 ಯೇಸು ಆತನಿಗೆ, "ನೀನು ನನ್ನನ್ನು ನೋಡಿದ್ದರಿಂದ ನಂಬಿದ್ದೀ, 20:29 1 ಪೇತ್ರ. 1:8; 2 ಕೊರಿ 5:7:ನೋಡದೆ ನಂಬಿದವರು ಧನ್ಯರು" ಎಂದು ಹೇಳಿದನು. 30 ಯೇಸು ಇನ್ನು ಬೇರೆ ಎಷ್ಟೋ ಸೂಚಕಕಾರ್ಯಗಳನ್ನು ತನ್ನ ಶಿಷ್ಯರ ಮುಂದೆ ಮಾಡಿದನು. ಅವುಗಳನ್ನೆಲ್ಲಾ ಈ ಗ್ರಂಥದಲ್ಲಿ ಬರೆದಿರುವುದಿಲ್ಲಾ. 31 ಆದರೆ 20:31 ಮತ್ತಾ 14:33:ಯೇಸುವೇ ದೇವಕುಮಾರನಾದ ಕ್ರಿಸ್ತನೆಂದು ನೀವು ನಂಬುವಂತೆಯೂ, 20:31 ಯೋಹಾ 3, 15, 16; 5:40; 6:53; 10:10:ನಂಬಿ ಆತನ ಹೆಸರಿನಲ್ಲಿ ನಿತ್ಯ ಜೀವವನ್ನು ಪಡೆದುಕೊಳ್ಳುವಂತೆಯೂ ಇಷ್ಟೆಲ್ಲಾ ಬರೆದಿದೆ.