ಯೇಸು ತನ್ನ ಶಿಷ್ಯರಿಗೆ ಪುನಃ ದರ್ಶನಕೊಟ್ಟದ್ದು
1 ತರುವಾಯ ಯೇಸು ತಿಬೇರಿಯ ಸಮುದ್ರದ ಬಳಿಯಲ್ಲಿ ಶಿಷ್ಯರಿಗೆ ಪುನಃ ಕಾಣಿಸಿಕೊಂಡನು: 2 ಸೀಮೋನ್ ಪೇತ್ರನೂ, ದಿದುಮನೆಂಬ ತೋಮನೂ, ಗಲಿಲಾಯದ ಕಾನಾ ಊರಿನ ನತಾನಯೇಲನೂ, ಜೆಬೆದಾಯನ ಮಕ್ಕಳೂ ಮತ್ತು ಆತನ ಶಿಷ್ಯರಲ್ಲಿ ಇನ್ನಿಬ್ಬರೂ ಕೂಡಿಬಂದಿದ್ದರು. 3 ಆಗ ಅವರಿಗೆ ಸೀಮೋನ ಪೇತ್ರನು, "ನಾನು ಮೀನು ಹಿಡಿಯಲು ಹೋಗುತ್ತೇನೆ" ಎಂದು ಹೇಳಲು ಅವರು ಅವನಿಗೆ, "ನಾವೂ ಸಹ ನಿನ್ನ ಜೊತೆಯಲ್ಲಿ ಬರುತ್ತೇವೆ" ಎಂದರು. ಅವರು ಹೊರಟು ದೋಣಿಯನ್ನು ಹತ್ತಿದರು. ಆದರೆ ಆ ರಾತ್ರಿ ಅವರಿಗೆ ಏನೂ ಸಿಗಲಿಲ್ಲ. 4 ಬೆಳಗಾಗುವಾಗ ಯೇಸು ದಡದಲ್ಲಿ ನಿಂತಿದ್ದನು. ಆದಾಗ್ಯೂ ಶಿಷ್ಯರು ಆತನನ್ನು ಯೇಸುವೇ ಎಂದು ಗುರುತಿಸಲಿಲ್ಲ. 5 ಆಗ ಯೇಸು ಅವರನ್ನು, 21:5 ಅಥವಾ, ಯುವಕರೇ. "ಮಕ್ಕಳಿರಾ, ನಿಮ್ಮಲ್ಲಿ ಮೀನುಗಳು ಉಂಟೋ?" ಎಂದು ಕೇಳಲು, ಅವರು ಆತನಿಗೆ "ಇಲ್ಲ" ಎಂದು ಉತ್ತರಕೊಟ್ಟರು. 6 ಆತನು ಅವರಿಗೆ, "ನೀವು ದೋಣಿಯ ಬಲಗಡೆಯಲ್ಲಿ ಬಲೆಯನ್ನು ಬೀಸಿರಿ; ಆಗ ನಿಮಗೆ ಸಿಕ್ಕುತ್ತವೆ" ಎಂದು ಹೇಳಿದನು. 21:6 ಲೂಕ 5:4,6,7:ಅವರು ಬಲೆ ಬೀಸಿದಾಗ ಮೀನುಗಳು ರಾಶಿ ರಾಶಿಯಾಗಿ ಬಲೆಗೆ ಬಂದು ಸೇರಿದ್ದರಿಂದ, ಅವರಿಗೆ ಬಲೆಯನ್ನು ಎಳೆಯುವುದಕ್ಕೆ ಸಾಧ್ಯವಾಗದೆ ಹೋಯಿತು. 7 ಆಗ ಯೇಸುವಿಗೆ ಪ್ರಿಯನಾಗಿದ್ದ ಶಿಷ್ಯನು ಪೇತ್ರನಿಗೆ, "ಆತನು ಕರ್ತನೇ" ಎಂದು ಹೇಳಿದನು. ಸೀಮೋನ್ ಪೇತ್ರನು ಅದನ್ನು ಕೇಳಿ ತಾನು ತೆಗೆದು ಬಿಟ್ಟಿದ್ದ ತನ್ನ ಮೇಲಂಗಿಯನ್ನು ಸುತ್ತಿಕೊಂಡು ಸಮುದ್ರದೊಳಗೆ ಧುಮುಕಿದನು. 8 ದಡವು ದೂರವಿರಲಿಲ್ಲ, ಹೆಚ್ಚು ಕಡಿಮೆ ಇನ್ನೂರು ಅಡಿ ದೂರವಿತ್ತು. ಉಳಿದ ಶಿಷ್ಯರು ಮೀನು ತುಂಬಿದ್ದ ಆ ಬಲೆಯನ್ನು ಎಳೆಯುತ್ತಾ ದೋಣಿಯಲ್ಲಿಯೇ ಬಂದರು. 9 ಅವರು ದಡಕ್ಕೆ ಬಂದು ಸೇರಿದಾಗ, ಕೆಂಡಗಳನ್ನೂ ಅವುಗಳ ಮೇಲೆ ಇಟ್ಟಿದ್ದ ಮೀನುಗಳನ್ನು ಮತ್ತು ರೊಟ್ಟಿಯನ್ನು ಕಂಡರು. 10 ಯೇಸು ಅವರಿಗೆ, "ನೀವು ಈಗ ಹಿಡಿದ ಮೀನುಗಳಲ್ಲಿ ಕೆಲವನ್ನು ತನ್ನಿರಿ" ಎಂದು ಹೇಳಲು, 11 ಸೀಮೋನ್ ಪೇತ್ರನು ದೋಣಿಯನ್ನು ಹತ್ತಿ ಬಲೆಯನ್ನು ದಡಕ್ಕೆ ಎಳದುಕೊಂಡು ಬಂದನು. ಅದು ನೂರೈವತ್ಮೂರು ದೊಡ್ಡ ಮೀನುಗಳಿಂದ ತುಂಬಿತ್ತು. ಅಷ್ಟು ಮೀನುಗಳು ಇದ್ದರೂ ಬಲೆಯು ಹರಿದಿರಲಿಲ್ಲ.